spot_img
Saturday, March 7, 2026
spot_img

ನಿವೃತ್ತ ಉಪನ್ಯಾಸಕ ಪ್ರೊ. ಕಟೀಲು ಮನೋಹರ ಪೈ ನಿಧನ

ಕುಂದಾಪುರ: ಭಂಡಾರ್‌ಕಾರ್‍ಸ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರೊಫೆಸರ್ ಕಟೀಲು ಮನೋಹರ ಪೈ (೮೧) ಜ. ೯ ರಂದು ನಿಧನರಾದರು.

ಸಸ್ಯಶಾಸ್ತ್ರದಲ್ಲಿ ಅಪಾರ ಪಾಂಡಿತ್ಯವುಳ್ಳ ಅವರು ಉತ್ತಮ ಕ್ರೀಡಾಪಟುವಾಗಿ, ಕನ್ನಡ, ಇಂಗ್ಲೀಷ್ ಸಾಹಿತ್ಯ ಅಧ್ಯಯನದ ಮೂಲಕ ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಪರಿಸರ ರಕ್ಷಣೆ ಬಗ್ಗೆ ಬಹಳ ಕಾಳಜಿವುಳ್ಳವರಾಗಿ ಸಮಾನ ಮನಸ್ಕರೊಂದಿಗೆ ಅಭಿಯಾನ ನಡೆಸಿದವರು. ರೋಟರಿ ಕುಂದಾಪುರ ದಕ್ಷಿಣದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದವರು.
ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ಕುಂದಾಪುರದ ಪ್ರಸಿದ್ಧ ಕಟೀಲು ಮನೆತನದ ಸದಸ್ಯರಾಗಿದ್ದ ಇವರು ಸ್ನೇಹಪರ ನಡವಳಿಕೆಯಿಂದ ಸಮಾಜದಲ್ಲಿ ಜನಪ್ರಿಯರಾಗಿದ್ದರು.

ಇವರು ಪತ್ನಿ ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ. ಹಲವು ಗಣ್ಯರು ಇವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!