spot_img
Saturday, March 7, 2026
spot_img

ಶಂಕರನಾರಾಯಣ ಮದರ್ ತೆರೆಸಾ ಶಾಲೆಯಲ್ಲಿ ‘ಅಭ್ಯುದಯ-2025’ ವೈವಿಧ್ಯಮಯ ಕಾರ್ಯಕ್ರಮ

ಶಂಕರನಾರಾಯಣ: ಶಂಕರನಾರಾಯಣ ಮದರ್ ತೆರೆಸಾ ಶಾಲೆಯಲ್ಲಿ ಹೈಸ್ಕೂಲ್ ವಿಭಾಗದ ವಾರ್ಷಿಕ ಬಹುಮಾನ ವಿತರಣೆ ಕಾರ್ಯಕ್ರಮದ ಅಂಗವಾಗಿ ಅಭ್ಯುದಯ-2025 ವೈವಿಧ್ಯಮಯ ಕಾರ್ಯಕ್ರಮವನ್ನು ಡಿ.20 ರಂದು ನಡೆಯಿತು.

ಉಡುಪಿ ಜಿಲ್ಲಾ ಮಾಜಿ ವಿದ್ಯಾಂಗ ಉಪ ನಿರ್ದೇಶಕ ದಿವಾಕರ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳು ಶಾಲಾ ದಿನಗಳಲ್ಲಿ ಶಿಸ್ತು ಬದ್ಧ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಉತ್ತಮ ಗುರಿಯನ್ನು ಇರಿಸಿಕೊಂಡು ಶ್ರದ್ಧೆಯಿಂದ ಅಧ್ಯಯನ ಮಾಡಿ ಬದುಕಿನಲ್ಲಿ ಪ್ರಗತಿ ಸಾಧಿಸಬೇಕು ಎಂದರು.

ಇನ್ನೋರ್ವ ಮುಖ್ಯ ಅತಿಥಿ ಹಿರಿಯ ಪತ್ರಕರ್ತರಾದ ಜಾನ್ ಡಿ ಸೋಜ ಮಾತನಾಡಿ, ಒಂದು ಮಗು ಪಠ್ಯದ ಶಿಕ್ಷಣವನ್ನಷ್ಟೇ ಪಡೆದರೆ ಶಿಕ್ಷಣ ಅಪೂರ್ಣವೆನಿಸುತ್ತದೆ. ಜೊತೆಗೆ ಜೀವನ ಮೌಲ್ಯಗಳು ಅಳವಡಿಸಿಕೊಳ್ಳುವುದು ಕೂಡಾ ಅತ್ಯವಶ್ಯಕ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಕೇವಲ ಪುಸ್ತಕಾಧಾರಿತ ಶಿಕ್ಷಣವಷ್ಟೇ ಅಲ್ಲದೆ ಮೌಲ್ಯಾಧಾರಿತ ಶಿಕ್ಷಣಕ್ಕೂ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯಕವಾಗುವ ವಿವಿಧ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡಲಾಗುತ್ತಿದೆ ಎಂದರು.

ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ, ಉಪಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ನಾಯಕ ಪ್ರೀತಮ್ ಜಿ, ವಿದ್ಯಾರ್ಥಿ ನಾಯಕಿ ಮಾನ್ವಿ ಶೆಟ್ಟಿ ಉಪಸ್ಥಿತರಿದ್ದರು . ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ಸ್ವಾಗತ ನೃತ್ಯದ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ವಿದ್ಯಾರ್ಥಿ ಪರಿಷತ್ ಸದಸ್ಯರು ಸಾಂಸ್ಕೃತಿಕ ಮತ್ತು ಕ್ರೀಡಾ ವರದಿಯನ್ನು ವಾಚಿಸಿದರು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಹೈಸ್ಕೂಲ್ ವಿಭಾಗದ ಕ್ರೀಡೆ, ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿ ಪ್ರೀತಮ್ ಜಿ ಇವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಮಾತನಾಡಿ ಮುಂದಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಹತ್ತನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ನೀಡುವ ಸಹಾಯಹಸ್ತ ನೀಡಲಾಗುವುದು ಎಂದರು.

ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ಪೋಷಕರ ಮನ ಸೆಳೆದವು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!