spot_img
Friday, January 30, 2026
spot_img

ಬಳ್ಳಾರಿ ಘಟನೆ : ಡಿಸಿ‌ಎಂಗೆ ವರದಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ಕುಂದಾಪುರ: ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ಇದರಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕನ ನಡೆಸಿ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನೇಮಕವಾದ ಕಾಂಗ್ರೆಸ್ ನಿಯೋಗ ಶನಿವಾರ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದೆ.
ನಿಯೋಗದ ಸದಸ್ಯರುಗಳಾದ ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಕುಮಾರ್ ನಾಯಕ್, ಚಳ್ಳಿಕೆರೆ ಶಾಸಕ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯರುಗಳಾದ ಜಕ್ಕಪ್ಪನವರು ಹಾಗೂ ಬಸವನಗೌಡ ಬಾದರ್ಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಜ.3 ರಂದು ಬಳ್ಳಾರಿಗೆ ತೆರಳಿದ್ದ ನಿಯೋಗದ ಸದಸ್ಯರು, ಪರಿಸ್ಥಿತಿ ಅವಲೋಕನ ನಡೆಸಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು, ಇಲಾಖಾ ಮುಖ್ಯಸ್ಥರು ಹಾಗೂ ಇತರ ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ವಿಸ್ತ್ರತವಾದ ವರದಿ ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!