spot_img
Saturday, March 7, 2026
spot_img

ಕೊಂಜಾಡಿ: ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ, ಒಕ್ಕೂಟಗಳ ವಾರ್ಷಿಕೋತ್ಸವ, ಭಜನಾ ಮಹಾಸಂಗಮ

ಆರ್ಡಿ: ಜನರಲ್ಲಿ ಧಾರ್ಮಿಕತೆ, ಶ್ರೇಷ್ಠ ಸಂಸ್ಕಾರ,ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಗುರುತಿಸಿಕೊಳ್ಳುವಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹತ್ವದ ಪಾತ್ರವನ್ನು ವಹಿಸುತಿದೆ ಎಂದು ಉಡುಪಿ ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಹೇಳಿದರು.

ಅವರು ಕೊಂಜಾಡಿ ಶ್ರೀದುರ್ಗಾಪರಮೇಶ್ವರಿ ದೇವಳದಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ,ಒಕ್ಕೂಟಗಳ ವಾರ್ಷಿಕೋತ್ಸವ,ಭಜನಾ ಮಹಾಸಂಗಮ ಸಭಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಾತನಾಡಿದರು.

ಬೆಳ್ವೆ ವಲಯ ಜನ ಜಾಗ್ರತಿ ವೇದಿಕೆ ಸುರೇಶ್ ಶೆಟ್ಟಿ ಆರ್ಡಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ,ಶುಭ ಹಾರೈಸಿದರು.

ಹೆಬ್ರಿ ತಾಲೂಕು ಜನ ಜಾಗ್ರತಿ ವೇದಿಕೆ ಅಧ್ಯಕ್ಷ ವಾದಿರಾಜ ಶೆಟ್ಟಿ, ಉಪಾಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ,ಶ್ರೀಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರಪ್ರಸಾದ್, ಜನ ಜಾಗ್ರತಿ ವೇದಿಕೆ ಸದಸ್ಯ ಎಚ್ ವಸಂತಕುಮಾರ್ ಶೆಟ್ಟಿ ಬೆಳ್ವೆ,ಸುಧಾಕರ ಶೆಟ್ಟಿ ಅರಸಮ್ಮಕಾನು,ಆರ್ಡಿ ಬೆಳ್ವೆ,ಭಾಲಕೃಷ್ಣ ಶೆಟ್ಟಿ ಮಡಾಮಕ್ಕಿ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಅಲ್ಬಾಡಿ ಘಟಕದ ವಲಯಾರಣ್ಯಾಧಿಕಾರಿ ಹೇಮಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ,ಕೊಂಜಾಡಿ ಶ್ರೀದುರ್ಗಾಪರಮೇಶ್ವರಿ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯೆ ಆಶಾ ಶೆಟ್ಟಿ, ಪ್ರಗತಿ ಬಂಧು ಸ್ವಸಹಾಯ ಸಂಘದ ಒಕ್ಕೂಟಗಳ ವಲಯಾಧ್ಯಕ್ಷ ಕೃಷ್ಣ ಪುತ್ರನ್ ಆರ್ಡಿ,ಹೆಬ್ರಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಗೋಪಾಲ ಕುಲಾಲ್, ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ ಹಾಗೂ ಇನ್ನೀತರರು ಉಪಸ್ಥಿತರಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ, ಬಿ ಸಿ ಟ್ರಸ್ಟ್ ಹೆಬ್ರಿ ತಾಲೂಕು,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ವೆ ವಲಯ ,ಜನ ಜಾಗೃತಿ ವೇದಿಕೆ ಬೆಳ್ವೆ ವಲಯ, ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ವೆ ವಲಯ ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ,ಒಕ್ಕೂಟಗಳ ವಾರ್ಷಿಕೋತ್ಸವ,ಭಜನಾ ಮಹಾಸಂಗಮ,ಸಾಧಕರಿಗೆ ಸನ್ಮಾನ,ಕ್ರೀಡಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಕೃಷ್ಣ ಪುತ್ರನ್ ಆರ್ಡಿ ಸ್ವಾಗತಿಸಿದರು.ಯೋಜನಾಧಿಕಾರಿ ಲೀಲಾವತಿ ಪ್ರಾಸ್ತಾವಿಕ ಮಾತನಾಡಿದರು.ಗಣೇಶ್ ಅರಸಮ್ಮಕಾನು,ಮೇಲ್ವಿಚಾರಕ ರಾಘವೇಂದ್ರ ಗೌಡ ಕಾರ್ಯಕ್ರಮ ನಿರೂಪಿಸಿದರು.ಸೇವಾ ಪ್ರತಿನಿಧಿ ಪ್ರಶಾಂತ್ ಗುಮ್ಮೋಲ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!