spot_img
Friday, January 30, 2026
spot_img

ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಾಪುರ ತಾಲೂಕು ಶಾಖೆಯ ವಾರ್ಷಿಕ ಮಹಾಸಭೆ: ಸನ್ಮಾನ

ಕುಂದಾಪುರ: ಕುಂದಾಪುರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಿ., ಕುಂದಾಪುರ ತಾಲೂಕು ಶಾಖೆಯ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜನವರಿ 11, ಭಾನುವಾರ ಕುಂದಾಪುರ ಬೋರ್ಡ್ ಹೈಸ್ಕೂಲ್ ನ ಲಕ್ಷ್ಮಿ ನರಸಿಂಹ ರೋಟರಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಿ., ಬೆಂಗಳೂರು ರಾಜ್ಯ ಉಪಾಧ್ಯಕ್ಷ ಹಾಗೂ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ದಿನಕರ ಶೆಟ್ಟಿ ಅಂಪಾರು ಕಾರ್ಯಕ್ರಮ ಉದ್ಘಾಟಿಸಿದರು.

ಕುಂದಾಪುರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಿ., ತಾಲೂಕು ಶಾಖೆಯ ಅಧ್ಯಕ್ಷರಾದ ಡಾ.ನಾಗೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಪ್ರೇಮಾನಂದ, ಬೈಂದೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ, ಕಾಪು ಅಧ್ಯಕ್ಷ ಬಸವರಾಜ, ಬ್ರಹ್ಮಾವರ ಸರಕಾರಿ ನೌಕರರ ಸಂಘದ ಅಧ್ಯಕ್ಷ ರವಿ ಎಸ್ ಬೈಕಾಡಿ, ಜಿಲ್ಲಾ ಖಜಾಂಚಿ ದಯಾನಂದ, ಜಿಲ್ಲಾ ರಾಜ್ಯ ಪರಿಷತ್ ಸದಸ್ಯ ಆನಂದ್ ಎಸ್ ಜತ್ತನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಧರ್ಮೇಂದ್ರ, ಹಿರಿಯ ಉಪಾಧ್ಯಕ್ಷರಾದ ಪರಶುರಾಮ್ ಎಮ್ ಎಮ್, ನಿತ್ಯಾನಂದ ಶೆಟ್ಟಿ, ಉಪಾಧ್ಯಕ್ಷ ಭಾಸ್ಕರ ಪೂಜಾರಿ, ವಿಜೇತ ಕುಮಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸರಕಾರಿ ನೌಕರರ ಸಂಘದಲ್ಲಿ ದುಡಿದು ನಿವೃತ್ತಿ ಹೊಂದಿದ ಸಂಘದ ಸದಸ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರಸ್ತುತ ನಿರ್ದೇಶಕರಿಗೆ ಗುರುತು ಚೀಟಿ ನೀಡಿ ಗೌರವಿಸಲಾಯಿತು. ಸಂಘದ ಕಾರ್ಯದರ್ಶಿ ಶೇಖರ್ ಪೂಜಾರಿ ವರದಿ ವಾಚಿಸಿ, ಕೋಶಾಧಿಕಾರಿ ಕಾಂತರಾಜು ಲೆಕ್ಕಪತ್ರ ಮಂಡಿಸಿ, ಖಜಾಂಚಿ ಗೋಪಾಲಕೃಷ್ಣ ವಂದಿಸಿ, ಗಣೇಶ್ ಶೆಟ್ಟಿ ಮೊಳಹಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!