spot_img
Thursday, March 5, 2026
spot_img

ಗುಜ್ಜಾಡಿಯಲ್ಲಿ ಗ್ರಾಮೋತ್ಸವ

ಕುಂದಾಪುರ : ಈ ವರ್ಷ ಬೈಂದೂರು ವಿಧಾನಸಭಾ ಕ್ಷೇತ್ರದ 43 ಪಂಚಾಯತ್‌ಗಳಲ್ಲಿ ಗ್ರಾಮೋತ್ಸವ ನಡೆಯುತ್ತಿದ್ದು, ಈ ಕಾರ್ಯಕ್ರಮದ ಮೂಲಕ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜನರಿಗೆ ಸರಕಾರದ ಸೌಲಭ್ಯ ದೊರಕಿಸಿಕೊಡುವ ಪ್ರಯತ್ನ ಮಾದರಿಯಾಗಿದೆ. ಗ್ರಾಮೋತ್ಸವ ಕಲ್ಪನೆ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಗ್ರಾಮದ ಜನರಿಗೆ ಸೇವೆ ನೀಡುವ ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಗ್ರಾಮ ಪಂಚಾಯತ್ ಗುಜ್ಜಾಡಿ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಸಮೃದ್ಧಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಗುಜ್ಜಾಡಿ ಸಹಭಾಗಿತ್ವದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಪರಿಕಲ್ಪನೆಯ ಬೈಂದೂರು ಉತ್ಸವ-೨೦೨೬ರ ಅಂಗವಾಗಿ ಗುಜ್ಜಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಮಂಗಳವಾರ ನಡೆದ ಗುಜ್ಜಾಡಿ ಗ್ರಾಮೋತ್ಸವ-೨೦೨೬ ಉದ್ಘಾಟಿಸಿ ಅವರು ಮಾತನಾಡಿದರು.
ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಜಲಜಾ ಮೊಗವೀರ, ಸದಸ್ಯರಾದ ಹರೀಶ ಮೇಸ್ತ, ರಾಜು ಪೂಜಾರಿ, ಜನಾರ್ದನ ಪೂಜಾರಿ, ಭಾರತಿ, ಯಮುನಾ ಪೂಜಾರಿ, ಲೋಲಾಕ್ಷಿ ಪಂಡಿತ್, ಜೆಸಿಂತಾ ಡಿ‌ಅಲ್ಮೇಡಾ, ತುಂಗಾ ಪೂಜಾರಿ, ನಾಯಕವಾಡಿ ಶ್ರೀ ನಾರಾಯಯಣಗುರು ಮಂದಿರದ ಕಾರ್ಯದರ್ಶಿ ಶಂಕರ ಪೂಜಾರಿ, ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಅಧ್ಯಕ್ಷ ರಘುರಾಮ, ಬೆಣ್ಗೇರೆ ಶ್ರೀ ನಾಗ ದೇವಸ್ಥಾನದ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಬೈಂದೂರು ಉತ್ಸವ ಸಮಿತಿ ಸಂಚಾಲಕ ಗಣೇಶ ಗಾಣಿಗ, ಕಾರ್ಯದರ್ಶಿ ಅನಿತಾ ಆರ್.ಕೆ., ಸಮೃದ್ಧಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ಅಧ್ಯಕ್ಷೆ ನಂದಿನಿ ಉಪಸ್ಥಿತರಿದ್ದರು. ಇದೇ ಸಂದರ್ಭ ದಾನಿಗಳಾದ ಚಂದ್ರ ನಾಯ್ಕ್ ಕೊಡಪಾಡಿ, ಸುರೇಂದ್ರ ನಾವಡ ಮಂಕಿ ಹಾಗೂ ಉಮೇಶ ಎಲ್.ಮೇಸ್ತ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪಿಡಿ‌ಒ ಶೋಭಾ ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!