spot_img
Thursday, March 5, 2026
spot_img

ಕುಂದಾಪುರ-ತೀರ್ಥಹಳ್ಳಿ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತನೆ ಮಾಡುವ ಪ್ರಸ್ತಾಪ:  ಹರ್ಷ

ಕುಂದಾಪುರ: ಕುಂದಾಪುರ-ತೀರ್ಥಹಳ್ಳಿ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಅಧಿಕೃತ ಪತ್ರವನ್ನು ರಾಜ್ಯ ಸರಕಾರ ಸಲ್ಲಿಸಿದೆ. ಅಂತರಾಜ್ಯ ಸಂಪರ್ಕ ಕೊಂಡಿಯಾಗಿರುವ ಈ ರಾಜ್ಯ ಹೆದ್ದಾರಿ ೫೨ನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತನೆ ಮಾಡುವುದು ಪ್ರಸ್ತುತ ತುಂಬಾ ಅಗತ್ಯವಿದ್ದು, ವಿಶೇಷ ಆದ್ಯತೆಯಾಗಿ ಪರಿಗಣಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆದಿದೆ.

ಈ ಬೆಳವಣಿಗೆ ಅತ್ಯಂತ ಸ್ವಾಗತಾರ್ಹವಾಗಿದ್ದು, ಈ ಸಂಬಂಧ ಪ್ರಯತ್ನಿಸಿದ ಸರಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಮಾಜ ಸೇವಕ ದಿನಕರ ಶೆಟ್ಟಿ ಮುಂಬಾರು ತಿಳಿಸಿದ್ದಾರೆ.

ಈ ಬಗ್ಗೆ ಕಳೆದ ಹತ್ತು ವರ್ಷಗಳಿಂದ ಸಂಬಂಧಪಟ್ಟವರಿಗೆ ಮನವಿ ಮಾಡುತ್ತಾ ಬರಲಾಗುತ್ತಿದ್ದು, ಮಾಧ್ಯಮಗಳ ಮೂಲಕ ಒತ್ತಾಯ ಮಾಡಲಾಗುತ್ತಾ ಬಂದಿದ್ದು, ಪ್ರಮುಖ ಸಂಪರ್ಕಕೊಂಡಿಯಾಗಿರುವ ಈ ರಾಜ್ಯ ಹೆದ್ದಾರಿಯನ್ನು ಶೀಘ್ರ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆಯಾಗಿ ಸಮಸ್ಯೆಗಳಿಗೆ ಪರಿಹಾರ ಸಿಗುವಂತಾಗಲಿ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಿವಮೊಗ್ಗ-ಮೂಡ್ಲಕಟ್ಟೆ ರೈಲ್ವೆ ಮಾರ್ಗವೂ ಜೋಡಣೆಯಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!