spot_img
Wednesday, March 4, 2026
spot_img

ಜ.18ಕ್ಕೆ ವಂಡ್ಸೆ ಗ್ರಾಮೋತ್ಸವ

ಕುಂದಾಪುರ: ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಪರಿಕಲ್ಪನೆಯ ಬೈಂದೂರು ಉತ್ಸವ-2026, ಗ್ರಾಮ ಪಂಚಾಯತ್ ವಂಡ್ಸೆ ಹಾಗೂ ಬೃಂದಾವನ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ ವಂಡ್ಸೆ ಗ್ರಾಮೋತ್ಸವ-2026 ಜನವರಿ 18 ಆದಿತ್ಯವಾರ ಬೆಳಿಗ್ಗೆ 9-30ಕ್ಕೆ ಸ.ಮಾ.ಹಿ.ಪ್ರಾ ಶಾಲೆ ವಂಡ್ಸೆ ವಠಾರದಲ್ಲಿ ನಡೆಯಲಿದೆ.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಕಂದಾಯ ಇಲಾಖೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ ಹಾಗೂ ನಮ್ಮ ಭೂಮಿ ಸಂಸ್ಥೆ, ಆಯುಷ್ ಇಲಾಖೆ, ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ಗ್ರಾಮೋತ್ಸವದಲ್ಲಿ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣೆ, ಜಿಲ್ಲಾ ಆಯುಷ್ ಆಯುರ್ವೇದ ಇಲಾಖೆ ಉಡುಪಿ ವೈದ್ಯರಿಂದ ಆಯುರ್ವೇದ ಚಿಕಿತ್ಸೆ ಉಚಿತ ತಪಾಸಣೆ ಹಾಗೂ ಔಷಧ ವಿತರಣೆ, ಸರ್ಕಾರಿ ಆಸ್ಪತ್ರೆ ಎನ್.ಸಿ.ಡಿ ವೈದ್ಯರಿಂದ ಹಿರಿಯ ನಾಗರಿಕರಿಗೆ ಹಾಗೂ ವಿಶೇಷಚೇತನರಿಗೆ ತಪಾಸಣೆ, ಆಪ್ತ ಸಮಾಲೋಚನೆ, ಔಷಧ ವಿತರಣೆ, ಕಾರ್ಮಿಕ ಇಲಾಖೆ ವೈದ್ಯರಿಂದ ನೋಂದಾಯಿತ ಕಾರ್ಮಿಕರು ಹಾಗೂ‌ಅವರ ಕುಟುಂಬಗಳಿಗೆ ಉಚಿತ ತಪಾಸಣೆ ಹಾಗೂ ಔಷಧ ವಿತರಣೆ, ಎ.ಜೆ ಆಸ್ಪತ್ರೆ ಜನರಲ್ ಮೆಡಿಸಿನ್ ಹಾಗೂ ಶುಗರ್, ಹೃದಯ ಸಂಬಂಧಿಸಿದ ಚಿಕಿತ್ಸೆ, ಕೃಷಿ ಸಲಕರಣೆಗಳ ಪ್ರದರ್ಶನ, ಮಾಹಿತಿ, ಸಾಕು ನಾಯಿಗಳಿಗೆ, ಬೆಕ್ಕುಗಳಿಗೆ ರೇಬಿಸ್ ನಿರೋಧಕ ಲಸಿಕೆ, ಮುದ್ದುಮನೆ ಕಣ್ಣಿನ ಆಸ್ಪತ್ರೆಯವರಿಂದ ಕಣ್ಣಿನ ತಪಾಸಣೆ, ತೋಟಗಾರಿಕೆ ಬಗ್ಗೆ ಮಾಹಿತಿ, ಆಯ್ದ ಫಲಾನುಭವಿಗಳಿಗೆ ತರಕಾರಿ ಬೀಜ ವಿತರಣೆ, ಕಂದಾಯ ಇಲಾಖೆಗೆ ಸಂಬಂಧಿಸಿದ ಮಾಹಿತಿ, ಸಂಜೀವಿನಿ ಸದಸ್ಯರಿಂದ ಆಹಾರ ಮೇಳ, ಮಹಿಳಾ ಸಬಲೀಕರಣ ಬಗ್ಗೆ ತಜ್ಞರಿಂದ ಮಾಹಿತಿ, ಗ್ರಂಥಾಲಯದಿಂದ ಪುಸ್ತಕ ಮಳಿಗೆ, ಮಾರಾಟ ಮಳಿಗೆ ಮೊದಲಾದವುಗಳು ಗ್ರಾಮೋತ್ಸವದಲ್ಲಿ ಇರಲಿದೆ. ಸಾರ್ವಜನಿಕರು ಇವೆಲ್ಲದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!