spot_img
Wednesday, February 18, 2026
spot_img

ಗಂಗೊಳ್ಳಿ ಗ್ರಾಮೋತ್ಸವ ಉದ್ಘಾಟನೆ

ಕುಂದಾಪುರ : ಜನರಿಗೆ ಸರಕಾರದ ಸೌಲಭ್ಯ ದೊರಕಿಸಿಕೊಡುವ ಉದ್ದೇಶದಿಂದ ಸರಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಗ್ರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಗ್ರಾಮದ ಜನರಿಗೆ ಸೇವೆ ನೀಡುವ ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು.

ಗ್ರಾಮ ಪಂಚಾಯತ್ ಗಂಗೊಳ್ಳಿ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಗಂಗೋತ್ರಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಗಂಗೊಳ್ಳಿ ಸಹಭಾಗಿತ್ವದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಪರಿಕಲ್ಪನೆಯ ಬೈಂದೂರು ಉತ್ಸವ-೨೦೨೬ರ ಅಂಗವಾಗಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆದ ಗಂಗೊಳ್ಳಿ ಗ್ರಾಮೋತ್ಸವ-೨೦೨೬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಿ.ಲಕ್ಷ್ಮೀನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ನೋಡೆಲ್ ಅಧಿಕಾರಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಆಶಾ, ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ತಾಪಂ ಮಾಜಿ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಪಂ ಮಾಜಿ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಬೈಂದೂರು ಉತ್ಸವ ಸಮಿತಿ ಸಂಚಾಲಕ ಗಣೇಶ ಗಾಣಿಗ, ಕಾರ್ಯದರ್ಶಿ ಅನಿತಾ ಆರ್.ಕೆ., ಗಂಗೋತ್ರಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ಅಧ್ಯಕ್ಷೆ ಶೋಭಾ, ಗ್ರಾಪಂ ಕಾರ್ಯದರ್ಶಿ ಅನೂಪ್ ಶೇಟ್ ಉಪಸ್ಥಿತರಿದ್ದರು. ಇದೇ ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪಿಡಿ‌ಒ ರವಿ ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!