spot_img
Wednesday, February 18, 2026
spot_img

ಜನತಾ ಪಿಯು ಹೆಮ್ಮಾಡಿಯಲ್ಲಿ ರೆಡ್ ಕ್ರಾಸ್ ಕಾರ್ಯಗಾರ

 

ಹೆಮ್ಮಾಡಿ: ರೆಡ್ ಕ್ರಾಸ್ ಮಾನವೀಯನೆಲೆಯಲ್ಲಿ ಕೆಲಸ ಮಾಡುವ ದೊಡ್ಡ ಸಂಸ್ಥೆ, ಬೇರೆ ಸಂಸ್ಥೆಗಳಿಂದ ಭಿನ್ನವಾಗಿರುವ ರೆಡ್ ಕ್ರಾಸ್ ದೇಶದ ಉದ್ದಗಲಕ್ಕೂ  ಹಲವಾರು ಜನಪರ, ಜನಹಿತ ಕಾರ್ಯಗಳನ್ನು ಮಾಡಿದೆ, ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಚೇರ್ ಮೆನ್ ಜಯಕರ ಶೆಟ್ಟಿ ಅಭಿಪ್ರಾಯ ಪಟ್ಟರು.

ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕ, ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಸರೆಯಲ್ಲಿ ನಡೆದ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಡಾ. ಸೋನಿ ಡಿಕಾಸ್ಟ್ ರವರು ಪ್ರಥಮ ಚಿಕಿತ್ಸೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರಥಮ ಚಿಕಿತ್ಸೆ ಹೇಗೆ ಮಾಡುವುದು ಅದರ ಪ್ರಥಮ ಹಂತದ ಕಾರ್ಯಗಳು ಯಾವುವು, ತೆಲೆಸುತ್ತಿ ಬಿದ್ದವ್ಯಕ್ತಿ ಗೆ ಯಾವ ರೀತಿ ಪ್ರಾಥಮಿಕ ಹಂತದಲ್ಲಿ ಪ್ರಥಮ ಚಿಕಿತ್ಸೆ ನೀಡಬೇಕು, ಕರೆಂಟ್ ಶಾಕ್ ಹೊಡೆದ ವ್ಯಕ್ತಿಗಳನ್ನು ಯಾವ ರೀತಿ ಪ್ರಥಮ ಚಿಕಿತ್ಸೆ ನೀಡಬೇಕು ಎಂಬ ಹಲವು ವಿಷಯಗಳ ಕುರಿತು ಅರ್ಥಪೂರ್ಣ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ  ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಟ್ರಸರರ್ ಶಿವರಾಮ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ರಮೇಶ್ ಪೂಜಾರಿ,ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಕುಲಾಲ್  ಹೆಮ್ಮಾಡಿ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕರಾದ ಅಲ್ತಾರು ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!