spot_img
Thursday, March 5, 2026
spot_img

ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಖಾಸಗಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜೂನ್ 1ರ ತನಕ ಅವಕಾಶ

ಉಡುಪಿ: ಉಡುಪಿ ಜಿಲ್ಲೆಯ ಎಲ್ಲಾ ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸಿಕೊಳ್ಳಲು ಜೂನ್ 1 ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಮಾರ್ಚ್ ವರೆಗೆ ನಡೆಯುತ್ತಿರುವ ಶಾಲಾ ಮತ್ತು ಪರೀಕ್ಷಾ ಋತು ಮತ್ತು ಗ್ಯಾರೇಜ್‌ಗಳ ಸೀಮಿತ ಲಭ್ಯತೆಯನ್ನು ಪರಿಗಣಿಸಿ, ಎಲ್ಲಾ ಖಾಸಗಿ ಬಸ್‌ಗಳಿಗೆ ಬಾಗಿಲುಗಳನ್ನು ಅಳವಡಿಸಲು ಜೂನ್ 1 ರವರೆಗೆ ಸಮಯ ನೀಡಲಾಗಿದೆ.

ಎಫ್.ಸಿ ನವೀಕರಣಕ್ಕೆ ಬಾಕಿ ಇರುವಂತಹ ಬಸ್ ಗಳಿಗೆ ಜೂನ್ 1 ರೊಳಗಾಗಿ ಬಾಗಿಲನ್ನು ಅಳವಡಿಸುವ ಷರತ್ತಿಗೊಳಪಟ್ಟು ಅರ್ಹತೆ ಇದ್ದಲ್ಲಿ ಎಫ್.ಸಿ ನವೀಕರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದಾಗ್ಯೂ ಬಸ್‌ಗಳಿಗೆ ಬಾಗಿಲನ್ನು ಅಳವಡಿಸದಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು.

ಬಾಗಿಲುಗಳನ್ನು ಅಳವಡಿಸುವವರೆಗೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪುಟ್ ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸದಂತೆ ಅರಿವು ಮೂಡಿಸಲು ಬಸ್ ಮಾಲಕರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!