spot_img
Thursday, March 5, 2026
spot_img

ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯಕ್ಕೆ ರಾಷ್ಟ್ರೀಯ ಮಾನ್ಯತೆ

ಕುಂದಾಪುರ: ಕುಂದಾಪುರ ತಾಲೂಕು ಆಲೂರು ಗ್ರಾಮದ ಕಳಿಯಲ್ಲಿರುವ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯಕ್ಕೆ ಎನ್.ಎ.ಬಿ.ಎಚ್ ಆಯುಷ್ ಮಾನದಂಡಗಳ ಪ್ರಕಾರ ಮೌಲ್ಯಮಾಪನ ಮಾಡಲ್ಪಟ್ಟಿರುವ ಚಿಕಿತ್ಸಾಲಯ ಎಂಬ ರಾಷ್ಟ್ರೀಯ ಮಾನ್ಯತೆ ದೊರಕಿದೆ.

ದಿಲ್ಲಿಯ ರಾಷ್ಟ್ರೀಯ ಆಸ್ಪತ್ರೆಗಳು ಹಾಗೂ ಆರೋಗ್ಯ ಸೇವೆಗಳ ಮಾನ್ಯತಾ ಮಂಡಳಿಯ ತಜ್ಞರ ತಂಡ ಆಲೂರಿನ ಚಿತ್ರಕೂಟ ಚಿಕಿತ್ಸಾಲಯಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದೆ. ಇಲ್ಲಿನ ಉತ್ತಮ ಗುಣಮಟ್ಟದ ಹಾಗೂ ಸುರಕ್ಷಿತ ರೀತಿಯ ಆರೋಗ್ಯ ಸೇವೆ, ಪ್ರಯೋಗ, ಪರಿಸರ ಇತ್ಯಾದಿಗಳನ್ನು ಗಮನಿಸಿದೆ. ಇಲ್ಲಿ ಹೊರ ರೋಗಿಗಳು ಹಾಗೂ ಒಳ ರೋಗಿಗಳಿಗೆ ಕಲ್ಪಿಸಿರುವ ಸುಸಜ್ಜಿತ ವ್ಯವಸ್ಥೆ, ವೈದ್ಯಕೀಯ ಸೇವೆ ಸಹಿತ ಎಲ್ಲ ವ್ಯವಸ್ಥೆಗಳನ್ನು ಪರಿಶೀಲಿಸಿದೆ. ಸುಮಾರು 250 ಕ್ಕೂ ಮಿಕ್ಕಿ ವಿವಿಧ ರೀತಿಯ ಮಾನದಂಡಗಳನ್ನೆಲ್ಲ ಪರಿಶೀಲಿಸಿ, ಗುಣಮಟ್ಟದ ಆಸ್ಪತ್ರೆ ಎಂದು ಮಾನ್ಯತೆ ನೀಡಿದೆ.

ಆಯುಷ್ ಆಸ್ಪತ್ರೆಗಳ ಪೈಕಿ ಈ ಗೌರವ ಪಡೆಯುತ್ತಿರುವ ಕೇವಲ ಎರಡನೇ ಆಯುರ್ವೇದ ಚಿಕಿತ್ಸಾಲಯ ಎಂಬ ಹೆಗ್ಗಳಿಕೆ ಚಿತ್ರಕೂಟದಲ್ಲಿ ದೇಶ ವಿದೇಶ ಹಾಗೂ ಸ್ಥಳೀಯ ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುವ ಸೇವೆಯೂ ಇದ್ದು ಇದು ಜಿಲ್ಲೆಯಲ್ಲಿರುವ ಆಯುಷ್ ಆಸ್ಪತ್ರೆಗಳ ಪೈಕಿ ಎರಡನೇ ಆಸ್ಪತ್ರೆಯಾಗಿದೆ. ಈ ಮೊದಲು ಉದ್ಯಾವರದ ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆಗೆ ಈ ಮನ್ನಣೆ ದೊರಕಿರುವುದು ಇಲ್ಲಿ ಸ್ಮರಿಸಿಕೊಳ್ಳಬಹುದು.

ಚಿತ್ರಕೂಟ ಇವತ್ತು ತನ್ನ ಸೇವೆ, ಆಯುರ್ವೇದ ವೈದ್ಯಕೀಯ ಸೇವೆ, ಬೇರೆ ಬೇರೆ ಚಿಕಿತ್ಸಾ ವಿಧಾನಗಳ ಮೂಲಕ ಪ್ರಸಿದ್ಧವಾಗಿದೆ. ಭಾರತ ಮಾತ್ರವಲ್ಲದೆ ಬೇರೆ ಬೇರೆ ದೇಶದವರು ಇಲ್ಲಿಗೆ ಆಗಮಿಸಿ ವಿವಿಧ ಆಯುರ್ವೆದ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರಕೂಟ ವೈದ್ಯಕೀಯ ಅಧೀಕ್ಷಕ ಡಾ| ರಾಜೇಶ್ ಬಾಯರಿ ಹಾಗೂ ಅವರ ತಂಡದವರ ಆಸಕ್ತಿ, ಶ್ರದ್ದೆ, ಶ್ರಮ, ಸೇವಾ ಮನೋಭಾವದ ಮೂಲಕ ಪ್ರಸಿದ್ಧಿ ಪಡೆದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!