spot_img
Thursday, March 5, 2026
spot_img

ಚಿತ್ತೂರು ಸಮೀಪ ಸುಟ್ಟು ಭಸ್ಮವಾದ ಕಾರು| ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರು

ಕುಂದಾಪುರ: ಚಿತ್ತೂರು ಗ್ರಾ.ಪಂ ವ್ಯಾಪ್ತಿಯ ಶಾರ್ಖೆ ಕ್ರಾಸ್ ಬಳಿ ಶನಿವಾರ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕಾರು ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೀಜಾಡಿಯ ಭಾಸ್ಕರ ಆಚಾರ್ಯ ಅವರಿಗೆ ಸೇರಿದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಕಾರು ಸುಟ್ಟು ಭಸ್ಮವಾಗಿದೆ.
ಆಲೂರಿನಿಂದ ಅವರು ಕುಂದಾಪುರಕ್ಕೆ ತೆರಳುತ್ತಿದ್ದರು. ಕಾರಿನ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಭಾಸ್ಕರ ಆಚಾರ್ ಅವರು ತಕ್ಷಣ ಕಾರನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದಾರೆ. ಕೂಡಲೇ ಬೆಂಕಿಯ ಕೆನ್ನಾಲಿಗಳು ಹರಡಿ ಕ್ಷಣಾರ್ಧದಲ್ಲಿ ಸುಟ್ಟು ಹೋಯಿತು. ಬೆಂಕಿ ನಂದಿಸುವ ಯಾವುದೇ ಪ್ರಯತ್ನವೂ ಸಪಲವಾಗಲಿಲ್ಲ. ಭಾಸ್ಕರ ಆಚಾರ್ಯ ಅವರ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!