spot_img
Saturday, March 21, 2026
spot_img

ಗಂಗೊಳ್ಳಿಯಲ್ಲಿ ‘ಅವಳ ನಿಟ್ಟುಸಿರು’ ಬಿಡುಗಡೆ

ಗಂಗೊಳ್ಳಿ : ಓದು ವ್ಯಸನವಾಗಬೇಕು ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ.  ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ ನಾಯ್ಕ್ ಅಭಿಪ್ರಾಯ ಪಟ್ಟರು.
 ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಡೆಯುಪರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ   ಎಸ್‌. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ ನಡೆದ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ  ಅಂಕಣ ಬರಹಗಳ ಸಂಕಲನ ‘ಅವಳ ನಿಟ್ಟುಸಿರು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೃತಿಯನ್ನು ಅನಾವರಣಗೊಳಿಸಿ ಮಾತನಾಡಿದರು.
 ಸಮಾರಂಭದಲ್ಲಿ ಉಪಸ್ಥಿತರಿದ್ದ ಪ್ರಯೋಗಾಲಯ ಸಹಾಯಕರಾದ ವಿಜಯಕುಮಾರ್ ಎನ್ ಮಾತನಾಡಿ ಸೃಜನಶೀಲ ಸಾಹಿತ್ಯ ಇಂದಿನ ಅಗತ್ಯ.  ಉತ್ತಮ ವಿಚಾರಗಳ ಓದು ನಮ್ಮ ವ್ಯಕ್ತಿತ್ವವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುತ್ತದೆ. ಅವಳ ನಿಟ್ಟುಸಿರು ಕೃತಿ ಈ ನಿಟ್ಟಿನಲ್ಲಿ ಉತ್ತಮ ಕೊಡುಗೆ ಎಂದು ಹೇಳಿದರು.
 ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿ ಆದಿತ್ಯ  ಎಸ್ ಪೂಜಾರಿ ಸ್ವಾಗತಿಸಿದರು.  ಲೇಖಕ  ನರೇಂದ್ರ ಎಸ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಭಿಜ್ಞಾ ಖಾರ್ವಿ ನಿರೂಪಿಸಿದರು. ಆಯಿಷಾ ನಿಫಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!