spot_img
Saturday, March 21, 2026
spot_img

ಜಿ.ಪಂ ಮಾಜಿ ಉಪಾಧ್ಯಕ್ಷ, ತಾ.ಪಂ. ಮಾಜಿ ಅಧ್ಯಕ್ಷ ರಾಜು ದೇವಾಡಿಗ ಇನ್ನಿಲ್ಲ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ, ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ (66 ವರ್ಷ) ಫೆ.3ರಂದು ನಿಧನರಾದರು.

ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು, ಉಡುಪಿ ಜಿಲ್ಲೆಯ ಸಕ್ರೀಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷದ ವಿವಿಧ ಜವಬ್ದಾರಿಗಳನ್ನು ನಿರ್ವಹಿಸಿ ತ್ರಿಸ್ತರ ಆಡಳಿತವನ್ನು ಪ್ರತಿನಿಧಿಸಿದವರು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್‌ಗಳನ್ನು ಚುನಾಯಿತ ಪ್ರತಿನಿಧಿಯಾಗಿ ಪ್ರತಿನಿಧಿಸಿದ್ದರು. 2007ರಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು.

ಸಹಕಾರ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ಅವರು ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಗಂಗೊಳ್ಳಿಯ ಪಂಚಗಂಗಾವಳಿ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ, ಬೇರೆ ಬೇರೆ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಗುಜ್ಜಾಡಿಯ ಭಾಸ್ಕರ ಪೈ ಸ್ಮಾರಕ ಶಾಲೆಯ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಬೈಂದೂರು ತಾಲೂಕು ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಪಾರ ದೈವಭಕ್ತರಾಗಿದ್ದ ಅವರು, ಅನೇಕ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದರು. ದೇವಾಡಿಗ ಸಮಾಜದ ತ್ರಾಸಿ ವಲಯ ಅಧ್ಯಕ್ಷರಾಗಿದ್ದ ಅವರು, ದೇವಾಡಿಗ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಕಳೆದ ಕೆಲವು ವರ್ಷಗಳಿಂದ ಅವರು ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!