spot_img
Friday, May 8, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ: ಕೆನರಾ ಬ್ಯಾಂಕ್ ನಿಂದ ಕೊಡುಗೆ ಹಸ್ತಾಂತರ

ಕುಂದಾಪುರ: “ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಆಧಾರಿತ ಕಲಿಕೆಯನ್ನು ಪ್ರೋತ್ಸಾಹಿಸುವುದು ಇಂದಿನ ಅಗತ್ಯ. ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ” ಎಂದು ಕೆನರಾ ಬ್ಯಾಂಕ್ ಹಳ್ಳಾಡಿಯ ಶಾಖಾ ವ್ಯವಸ್ಥಾಪಕರಾದ ಮಿಧುನ್ ರಾಜ್ ನುಡಿದರು.

ಅವರು ಕೆನರಾ ಬ್ಯಾಂಕ್ ಹಳ್ಳಾಡಿ ಇವರು ಸಿ ಎಸ್ ಆರ್ ಯೋಜನೆಯಡಿಯಲ್ಲಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಿದ ಒಂದು ಕಂಪ್ಯೂಟರ್ ಹಾಗೂ ಒಂದು ಒಂದು ಲ್ಯಾಪ್ ಟಾಪ್ ನ ಕೊಡುಗೆಯನ್ನು ಹಸ್ತಾಂತರಿಸಿ ಮಾತನಾಡುತ್ತಿದ್ದರು.

ಕೆನರಾ ಬ್ಯಾಂಕ್ ಹಳ್ಳಾಡಿಯ ಗುರುಪ್ರಸಾದ್, ಶಾಲಾ ಸಹಶಿಕ್ಷಕರಾದ ಸಂಜೀವ ಎಂ, ರಾಜೀವ ಕುಲಾಲ, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಸ್ವಾತಿ ಬಿ ಗೌರವ ಶಿಕ್ಷಕಿ ಮಧುರಾ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ ಸ್ವಾಗತಿಸಿದರು. ಸಹಶಿಕ್ಷಕಿ ವಿಜಯಾ ಆರ್ ವಂದಿಸಿದರು. ಸಹಶಿಕ್ಷಕ ಅಶೋಕ ತೆಕ್ಕಟ್ಟೆ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!