spot_img
Friday, February 6, 2026
spot_img

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ರಾಷ್ಟ್ರಮಟ್ಟದ ಗ್ರೀನ್ ಸ್ಕೂಲ್ ಅವಾರ್ಡ್

ಹಟ್ಟಿಯಂಗಡಿ: ಶುದ್ಧಪರಿಸರದಲ್ಲಿ ನಿರ್ಮಿತವಾದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ತನ್ನ ಪರಿಸರಸ್ನೇಹಿ ಕಾರ್ಯಗಳ ಮೂಲಕ ಸತತ ನಾಲ್ಕನೆಯ ಬಾರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ ಗ್ರೀನ್ ಸ್ಕೂಲ್ ಅವಾರ್ಡನ್ನು ತನ್ನದಾಗಿಸಿಕೊಂಡು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈ ಪ್ರಶಸ್ತಿಯನ್ನು ಪಡೆದ ಉಡುಪಿ ಜಿಲ್ಲೆಯ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಯಿತು.

ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್ (ಸಿ‌ಎಸ್‌ಇ) ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿ ೨೦,೦೦೦ ಕ್ಕೂ ಹೆಚ್ಚು ಶಾಲೆಗಳು ಸ್ಪಧೆಯಲ್ಲಿ ಭಾಗವಹಿಸಿದ್ದವು. ಶುದ್ಧ ಗಾಳಿ, ಇಂಧನ, ಆಹಾರ, ಭೂಮಿ, ನೀರು, ತ್ಯಾಜ್ಯದ ವ್ಯವಸ್ಥಿತ ನಿರ್ವಹಣೆಯ ಮಾನದಂಡದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ದಿನಾಂಕ ೩೦-೦೧-೨೦೨೬ರಂದು ನವದೆಹಲಿಯಲ್ಲಿ ನಡೆದ ದಿ ಗ್ರೀನ್ ಸ್ಕೂಲ್ಸ್ ಕಾರ್ನಿವಲ್ ೨೦೨೬ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಕುಮಾರಿ ಸಂಗೀತಾ ಕೆ ಆರ್ ಹಾಗೂ ಶ್ರೀಮತಿ ವಿದ್ಯಾ ಅಮೀನ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ವಿದ್ಯಾರ್ಥಿಗಳಾದ ವಿಹಾನ್ ಹಂಚಿನಾಳ, ಗೌರೀಶ್ ಬಸವರಾಜ, ರಾಹುಲ್ ಉಳ್ಳೂರು, ನೇಚರ್ ಇನ್ ಫ್ರೇಮ್ಸ್ ಹಾಗೂ ದಿ ಗ್ರೀನ್ ಪಿಚ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಸೃಜನಶೀಲತೆಯನ್ನು ಪ್ರದರ್ಶಿಸಿದರು.

ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್ (ಸಿ‌ಎಸ್‌ಇ) ನ ಮಹಾ ನಿರ್ದೇಶಕರಾದ ಸುನೀತಾ ನರೇನ್ ಪ್ರಶಸ್ತಿಯನ್ನು ಹಸ್ತಾಂತರಿಸಿದರು.

ಸಂಸ್ಥೆಯು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗಳಿಸಿಕೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಮಾತನಾಡಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣಕುಮಾರ ಗ್ರೀನ್ ಸ್ಕೂಲ್ ಅವಾರ್ಡ್ ನಮ್ಮ ಸಂಸ್ಥೆಗೆ ಸಂದ ಅತ್ಯುನ್ನತ ಗೌರವವಾಗಿದ್ದು, ನಮ್ಮ ಸಂಸ್ಥೆಯಲ್ಲಿರುವ ಸುಸಜ್ಜಿತ ವ್ಯವಸ್ಥೆಗಳೇ ಈ ಪ್ರಶಸ್ತಿ ಪಡೆಯುವಲ್ಲಿ ಪ್ರಧಾನ ಪಾತ್ರ ವಹಿಸಿವೆ. ಸಮಾಜದಲ್ಲಿ ಮರಗಳ ನಾಶ ನಿರಂತರವಾಗಿ ಸಾಗುತ್ತಿದ್ದು, ಅರಣ್ಯ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸ ಶಾಲೆಗಳಲ್ಲಿ ನಿರಂತರವಾಗಿ ನಡೆಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಸಸ್ಯಪ್ರೀತಿಯನ್ನು ಹುಟ್ಟಿಸುವ ಉದ್ದೇಶದಿಂದ ಕೈದೋಟವನ್ನು, ವಿವಿಧ ಸಸ್ಯಗಳಿಂದ ಕೂಡಿದ ವನಗಳನ್ನು ನಿರ್ಮಿಸಿದ್ದು, ಅಲ್ಲಿ ಬೆಳೆದಿರುವ ತರಕಾರಿಗಳನ್ನು, ಔಷಧೀಯ ವಸ್ತುಗಳನ್ನು ನಿತ್ಯದ ಅಡುಗೆಗೆ ಬಳಸಲಾಗುತ್ತಿದೆ. ಶೈಕ್ಷಣಿಕ ಚಟುವಟಿಕೆಗಳ ಪ್ರತಿ ಹಂತದಲ್ಲಿಯೂ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತಾಗಿ ಮಾಹಿತಿ ಒದಗಿಸಿ, ಅವರಲ್ಲಿ ಅರಿವು ಮೂಡಿಸಲಾಗುತ್ತಿದೆ‌ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಅಂಗನವಾಡಿ ಶಿಕ್ಷಕರಿಗೆ ಹಾಗೂ ಸಹಾಯಕರಿಗೆ ಗ್ರಾಚುವಿಟಿ ಸೌಲಭ್ಯ ಒದಗಿಸಲು ಶಾಸಕ ಗಂಟಿಹೊಳೆ ಸದನದಲ್ಲಿ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಶಿಕ್ಷಕರಾಗಿ ಹಾಗೂ ಸಹಾಯಕರಾಗಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಈಗಾಗಲೇ ನಿವೃತ್ತರಾದವರು ತಮ್ಮ ಸೇವಾವಧಿಯಲ್ಲಿ ಅತೀ ಕಡಿಮೆ ಗೌರವ ಧನದಲ್ಲಿ ಸೇವೆ ಸಲ್ಲಿಸಿ, ಯಾವುದೇ ಇತರೆ ಸೌಲಭ್ಯಗಳಿಲ್ಲದೇ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!