spot_img
Tuesday, March 31, 2026
spot_img

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ ಇಹಲೋಕ ತ್ಯೇಜಿಸಿದರು. ಅವರು ೯೧ ವರ್ಷ ವಯಸ್ಸಾಗಿತ್ತು.

ಧಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿದ್ದ ಅಪ್ಪಣ್ಣ ಹೆಗ್ಡೆಯವರು ಕಳೆದ ವರ್ಷದ ತನಕವೂ ಜಿಲ್ಲೆಯ ಪ್ರತಿಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ನಾಯಕತ್ವ ನೀಡುತ್ತಿದ್ದರು. ನಾಗಮಂಡಲ, ಬ್ರಹ್ಮಕಲಶೋತ್ಸವ, ಪುನರ್ ಪ್ರತಿಷ್ಠೆ ಮುಂತಾದ ಮಹಾನ್ ಧಾರ್ಮಿಕ ಕಾರ್ಯಕ್ರಮಗಳಿಗೆ ಅಪ್ಪಣ್ಣ ಹೆಗ್ಡೆಯವರ ಮಾರ್ಗದರ್ಶನ ಅತ್ಯಗತ್ಯವಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳದ ಜೊತೆಗೆ ಅವಿನಾಭಾವ ಸಂಬಂಧ ಇಟ್ಟುಕೊಂಡಿದ್ದ ಅಪ್ಪಣ್ಣ ಹೆಗ್ಡೆ ಅವರು, ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರಾಗಿ ಸಾಕಷ್ಟು ವರ್ಷ ಸೇವೆ ಸಲ್ಲಿಸಿದ್ದರು. ಉಡುಪಿ ಜಿಲ್ಲೆಯಲ್ಲಿ ನೆಡೆದ ಎಲ್ಲಾ ನಾಗಮಂಡಲೋತ್ಸವಗಳ ಯಶಸ್ಸಿನಲ್ಲಿ ಅಪ್ಪಣ್ಣ ಹೆಗ್ಡೆ ಅವರ ಉಪಸ್ಥಿತಿ ಮಾರ್ಗದರ್ಶನವಿತ್ತು.

ಜನತಾ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ೧೯೮೩ರಿಂದ ೧೯೮೫ರ ತನಕ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿ ಹಲವು ಮಹತ್ವದ ಯೋಜನೆಗಳ ಅನುಷ್ಟಾನಿಸಿದ್ದರು. ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಭೂ ಬ್ಯಾಂಕ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!