spot_img
Wednesday, March 25, 2026
spot_img

ಹಿರಿಯ ರಾಜಕಾರಣಿ, ಮುತ್ಸದ್ಧಿಯನ್ನು ಕಳೆದುಕೊಂಡಿದ್ದೇವೆ-ಬಿ.ವೈ.ರಾಘವೇಂದ್ರ

ಕುಂದಾಪುರ: ಕರಾವಳಿ ಪ್ರದೇಶದ ಹಿರಿಯ ರಾಜಕಾರಣಿ, ಧಾರ್ಮಿಕ ನಾಯಕ, ಶಿಕ್ಷಣ ತಜ್ಞ ಹಾಗೂ ಸಂಪ್ರದಾಯದ ಮಹತ್ವದ ಸಂಘಟಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರ ಅಕಾಲಿಕ ನಿಧನದಿಂದ ಹಿರಿಯ ರಾಜಕಾರಣಿ, ಮುತ್ಸದ್ಧಿಯನ್ನು ಕಳೆದುಕೊಂಡಂತಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿ ಅವರ ಸೇವೆ, ಸಮಾಜದ ಏಕತೆಗೆ ನೀಡಿದ ಕೊಡುಗೆ ಹಾಗೂ ಕರಾವಳಿಯ ಸಾಂಸ್ಕೃತಿಕ ಪರಂಪರೆಯಾದ ಕಂಬಳವನ್ನು ಉತ್ತೇಜಿಸಿದ ಅವರ ಪ್ರಯತ್ನಗಳು ಸದಾಕಾಲ ಸ್ಮರಣೀಯವಾಗಿರುತ್ತವೆ. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ನೀಡಿದ ಮಾರ್ಗದರ್ಶನ ಅನೇಕ ಜನರಿಗೆ ಪ್ರೇರಣೆಯಾಗಿದೆ.ಈ ದುಃಖದ ಘಳಿಗೆಯಲ್ಲಿ ಭಗವಂತನು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತಾ, ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಅಗಲಿದ ನಾಯಕನ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!