spot_img
Saturday, April 11, 2026
spot_img

ಮಾರಣಕಟ್ಟೆಯಲ್ಲಿ ಚತುಷ್ಪವಿತ್ರ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಮಾರಣಕಟ್ಟೆ: ಮಾರಣಕಟ್ಟೆಯ ಎಮ್.ಎಸ್.ಶ್ರೀಧರ ಮಂಜ ಮತ್ತು ಸಹೋದರರು ಮಾರ್ಚ್ 19ರಂದು ಶ್ರೀ ಕ್ಷೇತ್ರ ಮಾರಣಕಟ್ಟೆಯ ಅನುಗ್ರಹ ವಠಾರದಲ್ಲಿ ನಡೆಸಲಿರುವ ಚತುಷ್ಪವಿತ್ರ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ ಫೆ.15 ರಂದು ಬೆಳಿಗ್ಗೆ ನಡೆಯಿತು.

ಸೇವಾಕರ್ತರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಆಗಮಿಸಿದ ಎಲ್ಲರನ್ನು ಸ್ವಾಗತಿಸಿಕೊಂಡು, ಚತುಷ್ಪವಿತ್ರ ನಾಗಮಂಡಲೋತ್ಸವದ ಯಶಸ್ಸಿಗೆ ಸಹಕರಿಸುವಂತೆ ವಿನಂತಿಸಿದರು.

ಮಾತೃಶ್ರೀ ವಿಶಾಲಕ್ಷಿಯಮ್ಮ ಶ್ರೀಮತಿ ವಿಜಯಲಕ್ಷ್ಮೀ ಮತ್ತು ಎಂ.ಎಸ್.ಶ್ರೀಧರ ಮಂಜ, ಶ್ರೀಮತಿ ಶಾಂತಿ ಮತ್ತು ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಸುಪ್ರಭಾತ್ ಗ್ರೂಫ್ ಆಫ್ ಹೋಟೆಲ್ಸ್ ಹೈದರಬಾದ್, ಶ್ರೀಮತಿ ಶೈಲಾ ಮತ್ತು ನಾಗರಾಜ ಮಂಜ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಡಾ.ಅತುಲ್ ಕುಮಾರ್ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಆಚಾರ್ಯ, ನಿರಾಮಯ ಸೊಸೈಟಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ನಿವೃತ್ತ ಮುಖ್ಯೋಪಾಧ್ಯಾಯ ಶಿಕ್ಷಕ ಶಶಿಧರ ಶೆಟ್ಟಿ, ವಂಡ್ಸೆ ಸಮೂಹ ಸಂಪನ್ಮೂಲ ವ್ಯಕ್ತಿ ಎಂ. ನಾಗರಾಜ ಶೆಟ್ಟಿ, ಶಿಕ್ಷಕ ರವಿರಾಜ್ ಶೆಟ್ಟಿ, ಶಿಕ್ಷಕ ಬಾಲಕೃಷ್ಣ ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ಧನ ಜೋಗಿ, ನಿವೃತ್ತ ಶಿಕ್ಷಕ ನಾರಾಯಣ ಶೆಟ್ಟಿ, ಚಂದ್ರ ಶೆಟ್ಟಿ, ಗುತ್ತಿಗೆದಾರ ಸೀತಾರಾಮ ಮಡಿವಾಳ, ನಿವೃತ್ತ ಕೃಷಿ ಅಧಿಕಾರಿ ರಘುರಾಮ ಶೆಟ್ಟಿ, ನಾರಾಯಣ ಶೆಟ್ಟಿ, ನ್ಯಾಯವಾದಿ ಕುಸುಮಾಕರ ಶೆಟ್ಟಿ, ಚಿತ್ತೂರು ಆನಂದ ಹಾರ್ಡ್‌ವೇರ್ ಮಾಲಕ ಅನಿಲ್ ಕುಮಾರ್ ಶೆಟ್ಟಿ, ಚಿತ್ತೂರು ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ಶೆಟ್ಟಿ, ಚಿತ್ತೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಸಂತೋಷ ಮಡಿವಾಳ ಮೊದಲಾದವರು ಉಪಸ್ಥಿತರಿದ್ದರು.

ಪುರೋಹಿತರಾದ ನೆಂಪು ನರಸಿಂಹ ಭಟ್ ಹಾಗೂ ದಿನಕರ ಉಡುಪ ಹರವರಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!