spot_img
Saturday, April 11, 2026
spot_img

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಅಚ್ಲಾಡಿ ಪುನರಾಯ್ಕೆ

ಬ್ರಹ್ಮಾವರ,: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬ್ರಹ್ಮಾವರ ಗಜಾನನ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಪ್ರಜಾವಾಣಿಯ ಶೇಷಗಿರಿ ಭಟ್, ಕೋಶಾಧಿಕಾರಿಯಾಗಿ ವಿಜಯವಾಣಿಯ ರವೀಂದ್ರ ಕೆ., ಕಾರ್ಯದರ್ಶಿಯಾಗಿ ಹರೀಶ್ ಕಿರಣ್ ತುಂಗ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಬಂಡಿಮಠ ಶಿವರಾಮ ಆಚಾರ್ಯ, ಉದಯ ಆಚಾರ್ಯ, ಅಲ್ತಾರು ನಾಗರಾಜ್, ಪ್ರವೀಣ್ ವಿ., ಅನಂತ ನಾಯಕ್ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!