spot_img
Friday, February 20, 2026
spot_img

ಮುನಿಯಾಲು ಸಂಜೀವಿನಿ ಗೋಧಾಮ: ಕೃಷಿ ಸಾಧಕ ಬಿ.ಕೆ.ದೇವರಾಯ ಮಿತ್ತಬಾಗಿಲು ಅವರಿಗೆ ರೈತಪೀಠ ಪ್ರಶಸ್ತಿ ಪ್ರದಾನ

ಹೆಬ್ರಿ: ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ನಡೆಯುತ್ತಿರುವ ಏಕಪವಿತ್ರ ಶ್ರೀಮನ್ನಾಗಮಂಡಲದ ಮೊದಲ ಫೆ. 20ರಂದು ಸಂಜೆ ಶ್ರೀನಿವಾಸ ಸಭಾ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರೂಪದ ಕೃಷಿ ಸಾಧಕ, ಕೃಷಿ‌ಋಷಿ ಬಿ.ಕೆ.ದೇವರಾಯ ಮಿತ್ತಬಾಗಿಲು ಅವರಿಗೆ ರೈತಪೀಠ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸುಮಾರು 240ಕ್ಕೂ ಹೆಚ್ಚು ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ ಬಿ.ಕೆ.ದೇವರಾಯ ಮಿತ್ತಬಾಗಿಲು ಅವರು ಮೂಡಬಿದರೆ ಎಸ್.ಕೆ.ಎಫ್ ಸಂಸ್ಥೆ ನೀಡುವ ನೂತನ ಪ್ರಥಮ ರೈತಪೀಠ ಪ್ರಶಸ್ತಿಯನ್ನು ಸ್ವೀಕರಿಸಿದರು.

ಸಂಜೀವಿನಿ ಗೋಧಾಮದ ಪ್ರವರ್ತಕರಾದ ಮೂಡಬಿದರೆ ಎಸ್‌ಕೆ‌ಎಫ್ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ| ಜಿ.ರಾಮಕೃಷ್ಣ ಆಚಾರ್, ಮಹಾರಾಷ್ಟ್ರ ಕೊಲ್ಲಾಪುರ ಸಿದ್ಧಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಬೆಳಗಾವಿ ನಿಡಸೋಸಿ ಶ್ರೀ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ, ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ| ಎಂ ಮೋಹನ್ ಆಳ್ವಾ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬೆಳಿಗ್ಗೆಯಿಂದ ವಿವಿಧ ಕೃಷಿ ವಿಚಾರಗೋಷ್ಟಿಗಳು ನಡೆದವು. ಮೂರು ಮಹತ್ವದ ಗೋಷ್ಠಿಗಳು ನಡೆದವು.

ಮುನಿಯಾಲು ಸಂಜೀವಿನಿ ಗೋಧಾಮದ ಸವಿತಾ ಆರ್. ಆಚಾರ್, ಅನುಷಾ ಆಚಾರ್, ಪ್ರಜ್ವಲ್ ಆಚಾರ್, ಪೂಜಾ ಆಚಾರ್, ತೇಜಸ್ ಆಚಾರ್, ರಕ್ಷತ್ ಆಚಾರ್, ಸೇವಾ ಸಮಿತಿ ಅಧ್ಯಕ್ಷ ದೇವಿಪ್ರಸಾದ ಶೆಟ್ಟಿ ಸಾಣೂರುಗುತ್ತು, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಸಾವಿರಾರು ಜನ ಕೃಷಿಕರು, ಆಸಕ್ತ ವಿದ್ಯಾರ್ಥಿಗಳು ಇವತ್ತು ಬೆಳಿಗ್ಗೆಯಿಂದ ಗೋಷ್ಟಿಗಳಲ್ಲಿ ಭಾಗವಹಿಸಿದ್ದರು. ಬಳಿಕ ಸಂಜೀವಿನಿ ಗೋಧಾಮ ವೀಕ್ಷಿಸಿದರು. ಭಾಗವಹಿಸಿದ ಎಲ್ಲರನ್ನು ಸಂಜೀವಿನಿ ಗೋಧಾಮದ ಪ್ರವರ್ತಕರಾದ ಮೂಡಬಿದರೆ ಎಸ್‌ಕೆ‌ಎಫ್ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ| ಜಿ.ರಾಮಕೃಷ್ಣ ಆಚಾರ್ ಹಾಗೂ ಅವರ ಪತ್ನಿ, ಮಕ್ಕಳು, ಬಂಧುಗಳು ಆತ್ಮೀಯವಾಗಿ ಬರಮಾಡಿಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!