spot_img
Saturday, April 11, 2026
spot_img

ಯಡಾಡಿ- ಮತ್ಯಾಡಿ: ‘ಸ್ಮರಣಶಕ್ತಿಯ ತಂತ್ರಗಳು’ ಉಪನ್ಯಾಸ ಕಾರ್ಯಕ್ರಮ

ಕುಂದಾಪುರ (ಫೆ.07):ಇಲ್ಲಿನ ಯಡಾಡಿ-ಮತ್ಯಾಡಿಯಲ್ಲಿ ನಡೆದ ಕುಂದಾಪುರದ ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್.ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಸ್ಮರಣಶಕ್ತಿಯ ತಂತ್ರಗಳು’ ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜೆ.ಸಿ.ಐ. ತರಬೇತುದಾರರು ಹಾಗೂ ಶಿಕ್ಷಕರಾದ ಶ್ರೀ ಅಶೋಕ್ ತೆಕ್ಕಟ್ಟೆ ಅವರು ಎನ್.ಎಸ್.ಎಸ್.ಶಿಬಿರಾರ್ಥಿಗಳಿಗೆ ಸ್ಮರಣ ಶಕ್ತಿಯ ವಿವಿಧ ತಂತ್ರಗಳನ್ನು ಮನವರಿಕೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್ ಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಶ್ರೀ ವಿಘ್ನೇಶ್ವರ ಅಡಿಗ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪ್ರೇಮ ಜಪ್ತಿ, ಶ್ರೀಮತಿ ಸಾಕು ಜಪ್ತಿ ಹಾಗೂಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಡಾಡಿ-ಮತ್ಯಾಡಿಯ ಎಸ್.ಡಿ.ಎಂ.ಸಿ.ಸದಸ್ಯರುಗಳಾದ ಶ್ರೀಮತಿ ಸವಿತಾ, ಶ್ರೀಮತಿ ರಾಧಾ, ಶ್ರೀಮತಿ ಚೈತ್ರ ಹುಣ್ಸೆಮಕ್ಕಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂ ಸೇವಕಿ ಸಿಂಚನ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!