spot_img
Saturday, April 11, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ : ಪೋಷಕ -ಶಿಕ್ಷಕರ ಸಭೆ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ ಶಿಕ್ಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಕೆ. ರಾಧಾಕೃಷ್ಣ ಶೆಣೈಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀ.ನಂಜಾ ನಾಯ್ಕ್.ಎನ್, ಪೋಲಿಸ್ ಸಬ್ ಇನ್ಸಪೆಕ್ಟರ್ ಕುಂದಾಪುರ ಇವರು9ನೇ ತರಗತಿ ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಹಾಗೂ ಮೊಬೈಲ್ ಫೋನಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರು ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳ ಬಗ್ಗೆ ಗಮನಹರಿಸಿ, ತಾವೇ ಅವರಿಗೆ ಮಾದರಿಯಾಗಿದ್ದು, ಅವರನ್ನು ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕೆಂದು ತಿಳಿಸಿದರು.
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂದೀಪ್ ಗಾಣಿಗ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಶ್ರೀಮತಿ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಮೀಳಾ ಡಿಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಸಂಯೋಜಕ ಶಿಕ್ಷಕರಾದ ಶ್ರೀ ಮಾಧವ ಅವರು ವಂದಿಸಿದರು. ಸಹ ಶಿಕ್ಷಕಿ ನೇತ್ರಾವತಿಯವರು ಕಾರ್ಯಕ್ರಮವನ್ನು ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!