spot_img
Saturday, April 11, 2026
spot_img

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆ

ಕುಂದಾಪುರ, ಫೆ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಾಪುರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಯು ಚಾನೆಲ್ ವರದಿಗಾರ ನಾಗರಾಜ ರಾಯಪ್ಪನಮಠ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ವರದಿಗಾರ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಅಸ್ಟ್ರೋ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕುಂದಾಪುರದ ಭಂಡಾರ್ಕಾಸ್ ಕಾಲೇಜಿನ ಕೋಯಕುಟ್ಟಿ ಹಾಲ್ ನಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರುಗಳಾಗಿ ಉದಯವಾಣಿಯ ಸತೀಶ್ ಆಚಾರ್ ಮತ್ತು ಕುಂದಪ್ರಭದ ಸಂತೋಷ್ ಕುಂದೇಶ್ವರ, ಕೋಶಾಧಿಕಾರಿಯಾಗಿ ಕನ್ನಡಪ್ರಭಾದ ಶ್ರೀಕಾಂತ್ ಹೆಮ್ಮಾಡಿ, ಕಾರ್ಯದರ್ಶಿಗಳಾಗಿ ವಿಜಯವಾಣಿಯ ಮಂಜುನಾಥ ಶೆಣೈ ಜನ್ನಾಡಿ ಹಾಗೂ ದಾಯ್ಜಿ ವಲ್ಡ್ ನ ರಾಘವೇಂದ್ರ ಬಿ. ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಪ್ರಶಾಂತ್ ಪಾದೆ, ನಾಗರಾಜ ವಂಡ್ಸೆ, ಶ್ರೀಕರ್ ಎಸ್., ಸತೀಶ್ ಎಂ.ಬಿ., ವಿನಯ ಪಾಯಸ್, ಎಂ.ನಿತ್ಯಾನಂದ, ಸಂತೋಷ್ ಶೆಟ್ಟಿ, ಜಗದೀಶ್ ಮುಳ್ಳಿಕಟ್ಟೆ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಚಂದ್ರಶೇಖರ ಚಾಲುಕ್ಯ ರಾಘವೇಂದ್ರ ಪೈ, ಯೋಗೀಶ್ ಕುಂಭಾಶಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!