spot_img
Saturday, April 11, 2026
spot_img

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಉದಯ ಶಂಕರ್ ಆಯ್ಕೆ

ಬೈಂದೂರು, ಫೆ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಶಂಕರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ  ಅಸ್ಟೊ ಮೋಹನ್ ಅಧ್ಯಕ್ಷತೆಯಲ್ಲಿ ಶನಿವಾರ ಬೈಂದೂರು ಪ್ರವಾಸಿ ಬಂಗಲೆಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ವಿಜಯವಾಣಿಯ ನರಸಿಂಹ ನಾಯಕ್, ಕೋಶಾಧಿಕಾರಿಯಾಗಿ ಉದಯವಾಣಿಯ ಕೃಷ್ಣ ಬಿಜೂರು ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ವಿಫೋರ್ ನ್ಯೂಸ್‌ನ ಜಯಪ್ರಕಾಶ್ ವಿ. ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಷ್ಟಿçÃಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!