spot_img
Saturday, April 11, 2026
spot_img

ವಂಡ್ಸೆ ಪ್ರತಿಷ್ಠಾ ವರ್ಧಂತ್ಯುತ್ಸವ, ತಾಳಮದ್ದಳೆ

ಕುಂದಾಪುರ: ವಂಡ್ಸೆ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ಕಲಶಾಭೀಷೇಕ ಮತ್ತು ವಾರ್ಷಿಕ ಜಾತ್ರೆ ಫೆ.20 ಶುಕ್ರವಾರ ನಡೆಯಿತು.

ಶಾರ್ಕೆ ರಾಮಕೃಷ್ಣ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಪರಿವಾರಕ್ಕೆ ಕಲಶ, ಅಧಿವಾಸ ಹೋಮ, ಕಲಾತತ್ವ ಹೋಮ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ 7 ಗಂಟೆಗೆ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ ನಡೆಯಿತು.

ಮಧ್ಯಾಹ್ನ ಅಗ್ರಮಾನ್ಯ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ ಸುಧನ್ವಾರ್ಜುನ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕಾವ್ಯಶ್ರೀ ಅಜೇರು, ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ, ಚಂಡೆಯಲ್ಲಿ ಸತ್ಯಜಿತ್ ರಾಯಿ ಸಹಕರಿಸಿದರು. ಅರ್ಥಧಾರಿಗಳಾಗಿ ಗಣೇಶ ಶೆಟ್ಟಿ ಕನ್ನಡಿಕಟ್ಟೆ, ಪ್ರೋ.ಪವನ್ ಕಿರಣ್‌ಕೆರೆ, ಸದಾಶಿವ ಆಳ್ವ ತಲಪಾಡಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ವಂಡ್ಸೆ ದಿ.ನಾರಾಯಣ ಗಾಣಿಗರ ಸ್ಮರಣಾರ್ಥ ದಿ.ನಾರಾಯಣ ಗಾಣಿಗ ಕುಟುಂಬಸ್ಥರು ಕೊಡಮಾಡುವ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿಯನ್ನು ಭಾಗವತ ಸುಧಾಕರ ಕೊಠಾರಿ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿಯವರು ಪ್ರದಾನ ಮಾಡಲಾಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ. ಶ್ರೀಧರ ಶೆಟ್ಟಿ, ಆಡಳಿತ ಸಮಿತಿ ಸದಸ್ಯರಾದ ಶಶಿಧರ ಶೆಟ್ಟಿ, ರಾಜಶೇಖರ ಉಪಾಧ್ಯ, ಶ್ರೀನಿವಾಸ ಪೂಜಾರಿ, ಪ್ರೇಮಾನಂದ ಆಚಾರ್ಯ, ಶಾಲಿನಿ ಶ್ರೀಧರ ಶೆಟ್ಟಿ, ಸುಧಾಕರ ಮೊಗವೀರ, ಪಲ್ಲವಿ ಪ್ರದೀಪ ಶೆಟ್ಟಿ, ಭಾಸ್ಕರ ರಾಮ ವಂಡ್ಸೆ ಹಾಗೂ ಅರ್ಚಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!