spot_img
Saturday, April 11, 2026
spot_img

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಮಾ. 1ರಂದು ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣದ ಸಲುವಾಗಿ ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ ಸಮಾರಂಭ ಮಾರ್ಚ್ 1-2026ನೇ ಆದಿತ್ಯವಾರ ಬೆಳಿಗ್ಗೆ 9.30ಕ್ಕೆ ಉಚ್ಚಿಲದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್  ಸಭಾಂಗಣದಲ್ಲಿ ನಡೆಯಲಿದೆ.

ದ್ವಿಚಕ್ರ ವಾಹನ ಜಾಥಾ:
ಈ ಕಾರ್ಯಕ್ರಮದ ಪ್ರಯುಕ್ತ ದ್ವಿಚಕ್ರ ವಾಹನ ಜಾಥಾವನ್ನು ಆಯೋಜಿಸಲಾಗಿದ್ದು, ಮಾರ್ಚ್೧ರ ಬೆಳಿಗ್ಗೆ ಉತ್ತರ ದಿಕ್ಕಿನಿಂದ ಅಂದರೆ ಪಾಂಗಾಳ ಶ್ರೀ ಜನಾರ್ಧನ ದೇವಸ್ಥಾನದಿಂದ, ದಕ್ಷಿಣ ದಿಕ್ಕು ಅಂದರೆ ಹೆಜಮಾಡಿ ಟೋಲ್ ಪ್ಲಾಜಾದಿಂದ ದ್ವಿಚಕ್ರ ವಾಹನ ಜಾಥಾ ನಡೆಯಲಿದೆ.

ಸಾವಿರ ವರ್ಷಗಳ ಭವ್ಯ ಇತಿಹಾಸವಿರುವ ಮೊಗವೀರ ಸಮಾಜದ ಗುರುಪರಂಪರೆಯಲ್ಲಿ ಒಂಭತ್ತು ತಲೆಮಾರಿನ ಗುರುಗಳು ಸಮಾಜಕ್ಕೆ ಧಾರ್ಮಿಕ ಹಾಗೂ ಸಾಮಾಜಿಕ ನಾಯಕತ್ವ ವಹಿಸಿದ್ದು, ೧೯೬೬ರಲ್ಲಿ ಕೀರ್ತಿಶೇಷರಾದ ಶ್ರೀ ಮಾಧವ ಮಂಗಲ ಪೂಜಾರ್ಯರು ಕೊನೆಯ ಗುರುಗಳಾಗಿದ್ದರು. ಉಚ್ಚಿಲ ಶೀ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ಅಷ್ಟಮಂಗಲ ಪ್ರಶ್ನೆಯಂತೆ ಪರಮ ಪೂಜ್ಯ ಶ್ರೀ ಮಾಧವ ಮಂಗಲ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿಯನ್ನು ಸುಮಾರು ೩ ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಇದು ಸಮಾಜದ ಏಕತೆ ಮತ್ತು ಸ್ವಾಭಿಮಾನದ ಸಂಕೇತವಾಗಿದೆ. ಈ ಅಪರೂಪದ ಮಹತ್ಕಾರ್ಯದಲ್ಲಿ ಮೊಗವೀರ ಸಮಾಜದವರು ತಮ್ಮ ಶಕ್ತ್ಯಾನುಸಾರ ಗುರುಪಾದ ಕಾಣಿಕೆ ಸಮರ್ಪಿಸುವಂತೆ ತಿಳಿಸಲಾಗಿದೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!