spot_img
Friday, April 10, 2026
spot_img

ವಂಡ್ಸೆ: ವಾಲಿಕೆರೆ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

ವಂಡ್ಸೆ: ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಂಡ್ಸೆ-ಬಗ್ವಾಡಿ ಮುಖ್ಯರಸ್ತೆಯಿಂದ ವಾಲಿಕೆರೆಗೆ ಹೋಗುವ ರಸ್ತೆ ಕಾಂಕ್ರೀಟಿಕರಣಕ್ಕೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ರೂ.10 ಲಕ್ಷದ ಅನುದಾನ ಒದಗಿಸಿದ್ದು ಕಾಮಗಾರಿಗೆ ಗುದ್ದಲಿ ಪೂಜೆ ಫೆ.22ರಂದು ನಡೆಯಿತು.

ಶಾಸಕ ಗುರುರಾಜ ಗಂಟಿಹೊಳೆ ಅವರು ಗುದ್ದಲಿ ಪೂಜೆ ನೆರವೇರಿಸಿ, ಮುಂದಿನ ದಿನಗಳಲ್ಲಿ ಈ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿಕೊಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿ.ಕೆ ಶಿವರಾಮ ಶೆಟ್ಟಿ, ಬಿಜೆಪಿ ಮುಖಂಡರಾದ ದೀಪಕಕುಮಾರ್ ಶೆಟ್ಟಿ, ವೆಂಕಟೇಶ ಶೆಟ್ಟಿ ಅಬ್ಬಿ, ನಿರ್ಮಲ ವಂಡ್ಸೆ, ನಿತಿನ್ ಶೆಟ್ಟಿ, ನಿವೃತ್ತ ಕೃಷಿ ಅಧಿಕಾರಿ ಸುಧಾಕರ ಶೆಟ್ಟಿ, ಡಾ.ಕುಸುಮಾಕರ ಶೆಟ್ಟಿ, ಮಂಜುನಾಥ ಗಾಣಿಗ, ರಾಜೀವ ಶೆಟ್ಟಿ, ಅನಿತಾ ಶೆಟ್ಟಿ, ನಿತಿನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪುರೋಹಿತರಾದ ಸುರೇಶ ಐತಾಳ್ ಧಾರ್ಮಿಕ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಈ ರಸ್ತೆ ತೀರ ಹದಗೆಟ್ಟಿದ್ದು, ಇನ್ನಷ್ಟು ಅನುದಾನ ಒದಗಿಸಿ ಅಭಿವೃದ್ಧಿ ಪಡಿಸುವಂತೆ ಶಾಸಕರಿಗೆ ಮನವಿ ಮಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!