spot_img
Sunday, April 12, 2026
spot_img

4ನೇ ಮಹಿಳಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸವಿತಾ ಮಾಧವ ಶಾಸ್ತ್ರಿ

ಕೋಟ: ಕಾರಂತ ಪ್ರತಿಷ್ಠಾನ (ರಿ.) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ, ಕೋಟ, ನೆನಪು ಮತ್ತು ಉಸಿರು ಕೋಟ ಸಹಯೋಗದೊಂದಿಗೆ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ ೧೫ ರಂದು ಅಪರಾಹ್ನ ಕೋಟದ ಕಾರಂತ ಥಿಮ್ ಪಾರ್ಕ್‌ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ೪ನೇ ಮಹಿಳಾ ಕಾಲಮಿತಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸವಿತಾ ಮಾಧವ ಶಾಸ್ತ್ರಿಯನ್ನು ಆಯ್ಕೆ ಮಾಡಲಾಗಿದೆ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ ಸಿ ಕುಂದರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಂಚಾಯತ್ ಪಿಡಿ‌ಓ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಕಾರ್ಯಕ್ರಮ ನಿರ್ದೇಶಕಿ ಸುಶೀಲಾ ಸೋಮಶೇಖರ್ ತಿಳಿಸಿದ್ದಾರೆ.

ಸವಿತಾ ಮಾಧವ ಶಾಸ್ತ್ರಿಯವರು ಈ ತನಕ ಮೂರು ಕಥಾ ಸಂಕಲನ ಪ್ರಕಟಗೊಂಡಿವೆ. ಇವರು ಬರೆದಿರುವ ನೂರಾರು ಕಥೆಗಳು, ಹಾಸ್ಯ ಬರಹಗಳು ನಾಡಿನ ಪ್ರಸಿದ್ಧ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ. ಹಲವಾರು ರಾಜ್ಯ ಮಟ್ಟದ ಸಾಹಿತ್ಯಿಕ ಸ್ಪರ್ಧೆಯಲ್ಲಿ ಪುರಸ್ಕಾರಗಳಿಸಿದ್ದಾರೆ. ಅವರ ಕಥೆ ತೆಲುಗಿಗೆ ಅನುವಾದಗೊಂಡಿದ್ದು, ಅವರ ಕಥೆಯನ್ನು ಕೆನಡಾ ದೇಶದ ತಂಡ ಕಿರುಚಿತ್ರ ನಿರ್ಮಿಸುತ್ತಿದ್ದಾರೆ. ಪತಿ ಉದ್ಯಮಿ ಮಾಧವ ಶಾಸ್ತ್ರಿ, ಮಕ್ಕಳು ವೈಭವಿ, ಸಾನ್ವಿಯೊಂದಿಗೆ ನೆಲೆಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!