spot_img
Wednesday, February 25, 2026
spot_img

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ ಬಂದ ನಂತರ ಎಲ್ಲರಿಗೂ ಸಮಾಧಾನವಾಗಿದೆ. ಎಲ್ಲರಿಗೂ ಊಟ ಸಿಗುತ್ತಿದೆ. ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಅವರು ಇಂದು ಕಾರ್ಕಳದ ಕುಕ್ಕುಂದೂರಿನಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಡೆದ ಕಿಸಾನ್ ಸಭಾ ಸಭಾಂಗಣದ ಉದ್ಘಾಟಿಸಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರಿಗೆ ಈಗ ೮೬ ವರ್ಷ. ಈಗಲೂ ಅವರು ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ನೂರು ವರ್ಷಗಳ ಕಾಲ ನಮ್ಮೊಂದಿಗೆ ಇರಬೇಕು ಎಂದು ಹೇಳಿದ ಅವರು ಮಹಾಮಸ್ತಕಾಭಿಷೇಕಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದುವರೆಗೂ ೨೬ ಕಂತಿನ ಹಣವನ್ನು ೧.೨೪ ಕೋಟಿ ಮಹಿಳೆಯರಿಗೆ ತಲಾ ೫೨ ಸಾವಿರ ರೂಪಾಯಿಯಂತೆ ಹಾಕಿದ್ದೇವೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಒಂದು ಸೀಟು ಗೆದ್ದಿಲ್ಲ, ಆದರೆ ಉಡುಪಿ ಜಿಲ್ಲೆಯಲ್ಲಿ ಅತಿಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳು ಇದ್ದಾರೆ. ಇಡೀ ಕಾರ್ಕಳ ಕ್ಷೇತ್ರಾದ್ಯಂತ ಉದಯ್ ಕುಮಾರ್ ಅವರು ಮನೆ ಮನೆಗೆ ತಿರುಗಿ ಗೃಹಲಕ್ಷ್ಮಿ ಯೋಜನೆಯು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಿದ್ದಾರೆ ಎಂದು ಹೇಳಿದರು.

ಸಮಾಜ ಸೇವೆ ಎನ್ನುವುದು ಒಂದು ದಿನದ ಕೆಲಸವಲ್ಲ, ಅದು ಜೀವನದ ಧ್ಯೇಯವಾಗಬೇಕು. ನಮ್ಮ ಸಮಯ, ನಮ್ಮ ಶಕ್ತಿ ಮತ್ತು ನಮ್ಮ ಪ್ರತಿಭೆಯನ್ನು ಸಮಾಜದ ಹಿತಕ್ಕಾಗಿ ಬಳಸಿದರೆ, ನಮ್ಮ ರಾಜ್ಯ ಹಾಗೂ ರಾಷ್ಟ್ರ ಇನ್ನಷ್ಟು ಪ್ರಗತಿ ಸಾಧಿಸುತ್ತದೆ ಎನ್ನುವುದಕ್ಕೆ ಇಂದಿನ ಕಾರ್ಯಕ್ರಮ ಉದಾಹರಣೆ ಎಂದು ನಾನು ಭಾವಿಸುತ್ತೇನೆ. ಕಿಸಾನ್ ಸಭಾ ಟ್ರಸ್ಟ್ ಇನ್ನೂ ಅನೇಕ ವರ್ಷಗಳು ಇದೇ ರೀತಿಯ ಸೇವಾ ಕಾರ್ಯಗಳನ್ನು ಮುಂದುವರಿಸಿ, ಸಮಾಜಕ್ಕೆ ಬೆಳಕು ನೀಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಮಧು ಬಂಗಾರಪ್ಪ, ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮುಖಂಡರಾದ ಮಂಜುನಾಥ್ ಪೂಜಾರಿ, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಕಿಸಾನ್ ಸಭಾದ ಅಧ್ಯಕ್ಷರಾದ ಹರ್ಷ ಮೊಯ್ಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!