spot_img
Saturday, February 28, 2026
spot_img

ಬ್ರಹ್ಮಾವರ: ಪತ್ರಕರ್ತ, ಉಪ ಪ್ರಾಂಶುಪಾಲ ಶೇಷಗಿರಿ ಭಟ್ ಇನ್ನಿಲ್ಲ

ಬ್ರಹ್ಮಾವರ: ಪತ್ರಕರ್ತ, ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲ ಶೇಷಗಿರಿ ಭಟ್ ಆರೂರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂದು ಬೆಳಿಗ್ಗೆ ಮನೆಯ ಮಹಡಿಯ ರೂಮ್‌ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಳ ವ್ಯಕ್ತಿತ್ವದ ನಿಷ್ಕಳಂಕ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದ ಅವರು ಸಾಮಾಜಿಕ ಕಾಳಜಿ, ಗ್ರಾಮೀಣ ಕಾಳಜಿಯ ವಸ್ತುನಿಷ್ಠ ವರದಿಯ ಮೂಲಕ ಪ್ರಸಿದ್ಧರಾಗಿದ್ದರು. ಸೌಮ್ಯ ಸ್ವಭಾವದ ಅವರು ಮಿತಭಾಷಿಯಾಗಿದ್ದರು. ಇವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಬ್ರಹ್ಮಾವರ ತಾಲೂಕು ಘಟಕದ ಉಪಾಧ್ಯಕ್ಷರು ಆಗಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ.

ಸಂತಾಪ: ಶೇಷಗಿರಿ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತ ಪಡಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!