spot_img
Saturday, February 28, 2026
spot_img

ಮೌಲ್ಯಧಾರಿತ ಹಾಗೂ ಸಂಸ್ಕಾರಯುತ ಶಿಕ್ಷಣ ಇವತ್ತಿನ ಅಗತ್ಯ-ಶಂಕರ್ ಐತಾಳ್

ಕೋಟೇಶ್ವರ: ಪ್ರಾಥಮಿಕ ಶಿಕ್ಷಣವು ಪ್ರತಿಯೊಂದು ಮಗುವಿನ ಜೀವನದ ಪ್ರಮುಖ ಘಟ್ಟ, ಮೌಲ್ಯಧಾರಿತ ಶಿಕ್ಷಣ ಮತ್ತು ಸಂಸ್ಕಾರಯುತವಾದ ಶಿಕ್ಷಣ ಮಗುವಿಗೆ ಸಿಗುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು, ಸರಕಾರಿ ಶಾಲೆಗಳಲ್ಲಿ ಇಂತಹ ಶಿಕ್ಷಣ ದೊರೆಯಲು ಸಾಧ್ಯ, ಶಿಕ್ಷಕರ ಕೊರತೆ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಇಂದು ಸರಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿರುವುದು ಬಹಳ ಆತಂಕಕಾರಿಯಾಗಿದ್ದು ಎಸ್.ಡಿ.ಎಂ.ಸಿ ಸಮಿತಿಯವರು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಸಕ್ತರ ನೆರವಿನೊಂದಿಗೆ ಈ ಬಗ್ಗೆ ಸರಕಾರದ ಮಟ್ಟದಲ್ಲಿ ಶ್ರಮಿಸುವುದು ಇಂದಿನ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಸಮಿತಿಗಳನ್ನು ಸಬಲೀಕರಣಗೊಳಿಸುವ ಮೂಲಕ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ತನ್ನನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದು ಗೀತಾ ಹೆಚ್ ಎಸ್ ಎನ್ ಫೌಂಡೇಶನ್ ಇದರ ಅಧ್ಯಕ್ಷರು ಎಸ್.ಡಿ ಎಂ.ಸಿ ಸಮನ್ವಯ ಕೇಂದ್ರ ವೇದಿಕೆಯ ಮಹಾಪೋಷಕರು ಆದ ಶಂಕರ ಐತಾಳರು ಅಭಿಪ್ರಾಯ ಪಟ್ಟರು.

ಅವರು ಗೀತಾ ಎಸ್.ಎನ್ ಫೌಂಡೇಶನ್ ಕೋಟೇಶ್ವರ, ಗ್ರಾಮ ಪಂಚಾಯತ್ ಕೋಟೇಶ್ವರ, ಇವರ ಸಹಯೋಗದೊಂದಿಗೆ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಕುಂದಾಪುರ ತಾಲೂಕು ಘಟಕದ ವತಿಯಿಂದ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಭವನದಲ್ಲಿ ನಡೆದ ಕೋಟೇಶ್ವರ ಪಂಚಾಯತ್ ವ್ಯಾಪ್ತಿಯ ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಸದಸ್ಯರ ತರಬೇತಿ ಕಾರ್ಯಗಾರದಲ್ಲಿ ಅತಿಯಾದ ಮೊಬೈಲ್ ಬಳಕೆ ಮತ್ತು ಮಾದಕ ದ್ರವ್ಯ ಸೇವನೆಯಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳು ಮತ್ತು ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಎಸ್.ಡಿ.ಎಂ.ಸಿಯವರ ಪಾತ್ರದ ಕುರಿತು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಕೋಟೇಶ್ವರ ಕೆ.ಪಿ.ಎಸ್ ಉಪ ಪ್ರಾಂಶುಪಾಲರಾದ ಹರೀಶ್ ಕಾಮತ್ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ತರಬೇತಿಗಳನ್ನು ಪಡೆಯುವ ಮೂಲಕ ತನ್ನ ಜೀವನದಲ್ಲಿ ವ್ಯಕ್ತಿತ್ವ ವಿಕಸನ ಹೊಂದುತ್ತಾನೆ, ಜೊತೆಯಲ್ಲಿ ತನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗುತ್ತಾನೆ, ಈ ನಿಟ್ಟಿನಲ್ಲಿ ವೇದಿಕೆ ನೀಡುವ ಈ ತರಬೇತಿಯನ್ನು ಪಡೆದುಕೊಂಡು ಪ್ರತಿಯೊಬ್ಬರೂ ಕೂಡ ತಮ್ಮ ಶಾಲೆಗಳನ್ನು ಉಳಿಸಿ ಬೆಳೆಸಿ ಗುಣಮಟ್ಟದ ಶಿಕ್ಷಣ ನೀಡುವ ಕೇಂದ್ರಗಳನ್ನಾಗಿ ಮಾಡುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕೋಟೇಶ್ವರ ಕೆಪಿ‌ಎಸ್ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಚಂದ್ರ ನಾಯ್ಕ್, ಪುರಸಭಾ ಘಟಕದ ಅಧ್ಯಕ್ಷರಾದ ಅಶ್ವತ್ ಕುಮಾರ್, ಕಾಪು ತಾಲೂಕು ಉಸ್ತುವಾರಿಗಳಾದ ಅಶ್ಪಾಕ್, ಕುಂದಾಪುರ ತಾಲೂಕು ಘಟಕದ ಉಪಾಧ್ಯಕ್ಷರಾದ ಕೃಷ್ಣಾನಂದ ಶಾನುಭಾಗ್, ಬೈಂದೂರು ತಾಲೂಕು ಅಧ್ಯಕ್ಷರಾದ ಸಾಧಿಕ್ ಮಾವಿನಕಟ್ಟೆ, ಕುಂದಾಪುರ ತಾಲೂಕು ಉಪಾಧ್ಯಕ್ಷರಾದ ಕೃಷ್ಣಾನಂದ ಶಾನುಭಾಗ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರು ತರಬೇತು ದಾರರಾದ ಎಸ್.ವಿ ನಾಗರಾಜ್ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿದರು. ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ಪ್ರಮೋದ ಕೆ. ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಕುಂದಾಪುರ ನಿಕಟಪೂರ್ವ ಕಾರ್ಯದರ್ಶಿ ವರದ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ, ಬೈಂದೂರು ತಾಲೂಕು ಕಾರ್ಯದರ್ಶಿ ಶಾಂತ ಪೂಜಾರಿ, ಸಂಪನ್ಮೂಲ ವ್ಯಕ್ತಿ ಹೇಮಾ ಬೀಜಾಡಿ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!