spot_img
Tuesday, March 3, 2026
spot_img

ವಾರಾಹಿ ಉಳಿಸಿ: ಕಂಡ್ಲೂರು-ಸಿದ್ಧಾಪುರ ಕಾಂಗ್ರೆಸ್ ನೇತೃತ್ವದ ಪಾದಯಾತ್ರೆಗೆ ಚಾಲನೆ

ಕಂಡ್ಲೂರು: ವಾರಾಹಿ ನೀರು ಸದ್ಭಳಕೆಯಾಗಬೇಕು, ಈ ನೀರು ರೈತರಿಗೆ ಹಾಗೂ ಸಾರ್ವಜನಿಕರಿಗೆ ಉಪಯೋಗಕ್ಕೆ ಬರಬೇಕು, ಮೂಲ ಯೋಜನೆ ಅನುಷ್ಟಾನವಾಗಬೇಕು, ಬೈಂದೂರು ಕ್ಷೇತ್ರದ 3ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರು ಕೊಡುವ ಬಲದಂಡೆ ಯೋಜನೆಗೆ ತ್ವರಿತವಾಗಿ ಅನುಷ್ಟಾನವಾಗಬೇಕು, ಈಗ ಬಜೆಟ್ ಸಿದ್ಧತೆಗಳು ಆಗುತ್ತಿದೆ. ಸರಕಾರ ಬಜೆಟ್‌ನಲ್ಲಿ ಬಲದಂಡೆ ಯೋಜನೆ ಅನುಷ್ಟಾನಕ್ಕೆ ಮಂಜೂರಾತಿ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಹೇಳಿದರು.

ವಂಡ್ಸೆ ಮತ್ತು ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಪ್ರಜ್ಞಾವಂತ ನಾಗರಿಕರ ಸಹಯೋಗದೊಂದಿಗೆ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ನೇತೃತ್ವದಲ್ಲಿ ವಾರಾಹಿ ಬಲದಂಡೆ ಯೋಜನೆ ತ್ವರಿತ ಅನುಷ್ಟಾನ ಮತ್ತು ಸಿದ್ದಾಪುರ ಏತ ನೀರಾವರಿಯಲ್ಲಿ ಬಿಟ್ಟು ಹೋಗಿರುವ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕಂಡ್ಲೂರಿನಿಂದ ಸಿದ್ದಾಪುರ ಬೃಹತ್ ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗಪೂರ್ ಮಾತನಾಡಿ, ವಾರಾಹಿ ಯೋಜನೆ ಇವತ್ತು ೨ಸಾವಿರ ಕೋಟಿ ದಾಟಿದೆ. ಇವತ್ತಿಗೂ ಕೂಡಾ ಕುಂದಾಪುರ, ಹಾಗೂ ಬೈಂದೂರು ಕ್ಷೇತ್ರಕ್ಕೆ ನೀರು ನೀಡಬೇಕಾದ ಬಲದಂಡೆ ಯೋಜನೆ ಆರಂಭವಾಗಿಲ್ಲ. ಈ ಬಗ್ಗೆ ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಬಲದಂಡೆ ಯೋಜನೆ ಆರಂಭವಾಗಲೇಬೇಕು ಎಂದು ಪಟ್ಟು ಹಿಡಿದು ಸರಕಾರದ ಗಮನ ಸಳೆಯುವ ನಿಟ್ಟಿನಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ. ಸರಕಾರ ಗೋಪಾಲ ಪೂಜಾರಿಯವರ ಬೇಡಿಕೆಯನ್ನು ಈಡೇರಿಸುತ್ತದೆ ಎನ್ನುವ ನಂಬಿಕೆ ಇದೆ ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ವಾರಾಹಿ ಬಲದಂಡೆ ಯೋಜನೆ ಅನುಷ್ಟಾನವಾಗಬೇಕು, ಸಿದ್ಧಾಪುರ ಏತ ನೀರಾವರಿ ಯೋಜನೆಯ ಬಿಟ್ಟು ಹೋದ ಭಾಗಗಳಿಗೆ ನೀರು ಕೊಡಿಸುವ ವ್ಯವಸ್ಥೆ ಆಗಬೇಕು, ರೈತರ ಪರವಾಗಿ ನಡೆಯುವ ಈ ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಸಂಪಿಗೇಡಿ ಸಂಜೀವ ಶೆಟ್ಟಿ, ವಿಕಾಸ್ ಹೆಗ್ಡೆ, ಸಂತೋಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!