spot_img
Tuesday, March 3, 2026
spot_img

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ದಾಖಲೆಯ ರಕ್ತದಾನ

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.

ಕುಂದಾಪುರ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಶ್ರೀ ಜಯಕರ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು.
ರೆಡ್‌ಕ್ರಾಸ್ ಸೊಸೈಟಿಯ ಕಾರ್ಯವೈಖರಿ ಹಾಗೂ ರಕ್ತದಾನದ ಮಹತ್ವ ಕುರಿತು ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಮಾಹಿತಿ
ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್
ಇಂಟರ್‌ನ್ಯಾಷನಲ್ ಜಿಲ್ಲೆ 317Cಯ ಪ್ರಥಮ ಉಪ ಗವರ್ನರ್ MJF ಲಯನ್ ರಾಜೀವ ಕೋಟ್ಯಾನ್ ಹಾಗೂ
ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷ ಲಯನ್ ಸದಾನಂದ ನಾವಡ ಮುಖ್ಯ ಅತಿಥಿ ನೆಲೆಯ ಮಾತುಗಳನ್ನಾಡಿದರು.
ಲಯನ್ಸ್ ಕ್ಲಬ್, ಕುಂದಾಪುರ ಇದರ ಕಾರ್ಯದರ್ಶಿ ಕಾಲೇಜು ಆಡಳಿತ ಮಂಡಳಿಯ ಸದಸ್ಯ ಹು0ತ್ರಿಕೆ ಶ್ರೀ ಸುಧಾಕರ್ ಶೆಟ್ಟಿ
ಆಶಯ ನುಡಿಗಳನ್ನಾಡಿದರು.

ಈ ಸಂದರ್ಭ ಸಂಸ್ಥೆಯ ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಇಂಡಿಯನ್ ರೆಡ್‌ಕ್ರಾಸ್
ಸೊಸೈಟಿಯ ಕಾರ್ಯದರ್ಶಿ ಶ್ರೀ ಸತ್ಯನಾರಾಯಣ ಪುರಾಣಿಕ್, ಖಜಾಂಚಿ ಶ್ರೀ ಶಿವರಾಮ ಶೆಟ್ಟಿ, ಲಯನ್ಸ್ ಕ್ಲಬ್ ಸದಸ್ಯ
ಶ್ರೀ ಪ್ರಕಾಶ್, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ರಾಜೇಶ್ ಶೆಟ್ಟಿ, ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಶ್ರೀ
ಹರೀಶ್ ಬಿ. ಉಪಸ್ಥಿತರಿದ್ದರು.

ಈ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ 238 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ
ದಾಖಲೆ ಬರೆಯಲಾಯಿತು. ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಶ್ರೀ ಯೋಗೀಶ್ ಶಾನುಭೋಗ್ ಸ್ವಾಗತಿಸಿ,
ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್ ವಂದಿಸಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕಿ ಶ್ರೀಮತಿ
ಪೃಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!