spot_img
Tuesday, March 3, 2026
spot_img

ಡ್ಯುಯಲ್ ಸ್ಟಾರ್ ಶಾಲೆಯ ಮುಖ್ಯ ಶಿಕ್ಷಕಿಗೆ ಡಾ. ಶಿವರಾಮ ಕಾರಂತ ಮಹಿಳಾ ಸಾಧಕಿ ಪ್ರಶಸ್ತಿಗೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಹೊಸತನದ ಶೈಕ್ಷಣಿಕ ಕ್ರಾಂತಿಯನ್ನು ನಡೆಸುತ್ತಿರುವಂತಹ ಡ್ಯುಯಲ್ ಸ್ಟಾರ್ ಶಾಲೆಯು ಪ್ರತಿಭಾವಂತ ಶಿಕ್ಷಕರನ್ನು ಒಳಗೊಂಡಿರುವಂತಹ ಒಂದು ವಿದ್ಯಾ ಸಂಸ್ಥೆಯಾಗಿದ್ದು, ಈ ಸಂಸ್ಥೆಯಲ್ಲಿ ಕಳೆದ ಏಳು ವರ್ಷಗಳಿಂದ ತನ್ನದೇ ಆದಂತಹ ಹೊಸ ಆಲೋಚನಾ ಬೋಧನಾ ಕೌಶಲ್ಯವನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪಾಠ ಮತ್ತು ಬದುಕಿನ ನೈತಿಕ ಮೌಲ್ಯಗಳನ್ನು ಹೇಳಿಕೊಡುತ್ತಾ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅಚ್ಚಳಿಯದ ಶಿಕ್ಷಕಿ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ ಎಸ್ ಇವರಿಗೆ ಡಾ. ಶಿವರಾಮ ಕಾರಂತ ಹುಟ್ಟೂರು ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮತ್ತು ಉಸಿರು ಕೋಟ ವತಿಯಿಂದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಕೊಡ ಮಾಡುವ 2026 ನೇ ಸಾಲಿನ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಡಾ. ಶಿವರಾಮ ಕಾರಂತ ಸಾಧಕ ಸ್ತ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹತ್ತಾರು ಗ್ರಾಮಗಳಿಂದ ಶಾಲೆಗೆ ಬರುವಂತಹ ವಿದ್ಯಾರ್ಥಿಗಳಿಗೆ ಕಠಿಣ ವಿಷಯವಾದ ವಿಜ್ಞಾನವನ್ನು ಸುಲಲಿತವಾಗಿ ಬೋಧಿಸುತ್ತಾ ಕಳೆದ ಮೂರು ವರ್ಷಗಳಿಂದಲೂ ತನ್ನ ವಿಷಯದಲ್ಲಿ ನೂರಕ್ಕೆ ನೂರು ಫಲಿತಾಂಶ ತಂದು ಕೊಟ್ಟಿರುವಂತಹ ಸಾಧನೆ ಅಗ್ರಮಾನ್ಯವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನದಾದಂತಹ ಹವ್ಯಾಸವನ್ನು ಗಿಟ್ಟಿಸಿಕೊಂಡು ಉತ್ಖನನ ಎನ್ನುವ ಕವನ ಪ್ರಕಟಿಸಿದ್ದಾರೆ. ಪತ್ರಿಕೆಗಳಲ್ಲಿ ಇವರ ಹಲವಾರು ಲೇಖನಗಳು ಪ್ರಕಟವಾಗಿವೆ.

ಯಕ್ಷಗಾನ, ನಾಟಕ ಮತ್ತು ಸಂಗೀತ ಇವರ ಹವ್ಯಾಸ ಕ್ಷೇತ್ರವಾಗಿದ್ದು, ಶಾಲೆಯ ಜವಾಬ್ದಾರಿಗಳನ್ನು ತನ್ನ ಹೆಗಲಿಗೆರಿಸಿಕೊಂಡು ಶಾಲೆಯ ಬೆಳವಣಿಗೆ ಮತ್ತು ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ಬೆಂಬಲವಾಗಿ ನಿಂತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!