spot_img
Wednesday, March 4, 2026
spot_img

ಬ್ರಹ್ಮಾವರ ವಲಯದ ಶ್ರೀ ವಾಣಿ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಹಾಗು 2 ರ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಬ್ರಹ್ಮಾವರ ವಲಯದ ಶ್ರೀ ವಾಣಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದು ಇದರ ಉದ್ಘಾಟನಾ ಸಮಾರಂಭ ದಿನಾಂಕ 3 ಮಾರ್ಚ್2026 ರಂದು ನಡೆಯಿತು.
ಶಿಬಿರವನ್ನು ಉದ್ಘಾಟಿಸಿದ ಶ್ರೀ ವಾಣಿ ವಿದ್ಯಾಭಿವೃದ್ಧಿ ಸಂಘ ರಿಜಿಸ್ಟರ್ಡ್ ರಜತಾದ್ರಿ, ನಡೂರು ಇದರ ಅಧ್ಯಕ್ಷರಾದ ಬಿ ಭೋಜ ಹೆಗ್ಡೆ ಇವರು ಅನುಭವದ ಮೂಲಕ ಕಲಿತ ಪಾಠ ಜೀವನದುದ್ದಕ್ಕೂ ನಮ್ಮನ್ನು ಕಾಪಾಡುತ್ತದೆ ಎಂದು ನುಡಿದು ಶುಭಾಶಂಸನೆಗೈದರು. ಶಾಲಾ ಆಡಳಿತ ಮಂಡಳಿಯ ನಿರ್ದೇಶಕರಾದ ರಾಜಾರಾಮ್ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶ್ರೀವಾಣಿ ವಿದ್ಯಾ ಅಭಿವೃದ್ಧಿ ಸಂಘದ ಕಾರ್ಯದರ್ಶಿಗಳು ಹಾಗು ವಿನಯ ಆಸ್ಪತ್ರೆ ಕುಂದಾಪುರ ಇದರ ಆಡಳಿತ ನಿರ್ದೇಶಕರು ಆದ ಡಾಕ್ಟರ್ ಎನ್ ವಿಶ್ವನಾಥ ಶೆಟ್ಟಿ, ಸಂಸ್ಥೆಯ ಆಡಳಿತ ಅಧಿಕಾರಿಯಾದ ಎಂ ವಿಶ್ವನಾಥ್ ಶೆಟ್ಟಿ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು..
ಶಾಲೆಯ ಮುಖ್ಯೋಪಾಧ್ಯಾಯರಾದ ಅಶೋಕ್ ಶೆಟ್ಟಿ, ಕಾಲೇಜಿನ ಪ್ರಾಧ್ಯಾಪಕರಾದ ನಾಗರಾಜ್ ವೈದ್ಯ ಹಾಗೂ ನಾಗರಾಜ್ ಯು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಶಿಬಿರ ಅಧಿಕಾರಿಗಳಾದ ನಿರಂಜನ ಶರ್ಮ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಯೋಜನಾಧಿಕಾರಿಗಳಾದ ಶ್ರೀಮತಿ ಶ್ರುತಿ ಆಚಾರ್ಯ ಇವರು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕಿಯಾದ ವನಿಷಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!