spot_img
Thursday, March 5, 2026
spot_img

ಪಡುಕರೆ ಪದವಿ ಕಾಲೇಜಿನಲ್ಲಿ ಹಾಸ್ಯ ಕಾರ್ಯಕ್ರಮ

ದಿನಾಂಕ 2-3-2026ರಂದು ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ-ಪಡುಕರೆ. ಇಲ್ಲಿ “ಬದುಕು ಮತ್ತು ಹಾಸ್ಯ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಡುಪಿ ಅಜ್ಜರಕಾಡು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಪಿ.ಬಿ. ಪ್ರಸನ್ನ ಅವರು ಮಾತನಾಡುತ್ತಾ ಹಾಸ್ಯ ಪ್ರವೃತ್ತಿಯನ್ನು ಮೈಗೂಡಿಸಿಕೊಂಡರೆ ಬದುಕಿನ ಹಾದಿ ಸುಗಮವಾಗುತ್ತದೆ ಎಂಬ ಅಂಶವನ್ನು ತಮ್ಮ ಅನುಭವಗಳ ಮೂಲಕ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರಮೇಶ್ ಆಚಾರ್ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಪಾಠ ಪ್ರವಚನಗಳ ಜೊತೆಗೆ ಸಾಹಿತ್ಯ ಓದಿನ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿIQAC ಸಂಚಾಲಕರಾದ ಪ್ರೊ. ಸುಬ್ರಮಣ್ಯ ಎ ಅವರು ಉಪಸ್ಥಿತರಿದ್ದರು ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ್ ಕೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!