spot_img
Thursday, March 5, 2026
spot_img

ಯುವ ಸಂಶೋಧಕರಿಗೆ – ಐಎಂಜೆಐಎಸ್ ಸಿ ಬರವಣಿಗೆ ಕಾರ್ಯಗಾರ

ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ (IMJISC) ಐಟಿ ಮತ್ತು ಕೋಡಿಂಗ್ ಕ್ಲಬ್ ನ ಅಡಿಯಲ್ಲಿ “ಚಿಂತನೆಗಳನ್ನು ಸಂಶೋಧನಾತ್ಮಕ ಪ್ರಕಟಣೆಗಳಾಗಿ ಪರಿವರ್ತಿಸುವುದು – ಸಂಶೋಧನಾ ಬರವಣಿಗೆಗೆ ಆರಂಭಿಕ ಮಾರ್ಗದರ್ಶಿ” ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಎಂಐಟಿಕೆ ಯ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್  ನ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಡಾ. ಮಂಜುನಾಥ ರಾಮಣ್ಣ ಲಮಾಣಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಅವರು ವಿದ್ಯಾರ್ಥಿಗಳಿಗೆ ಸಂಶೋಧನಾ ಬರವಣಿಗೆಯ ಮೂಲಭೂತ ಅಂಶಗಳು, ವಿಷಯಗಳ ಆಯ್ಕೆ, ಪ್ರಬಂಧ ರಚನೆ ಮತ್ತು ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಪ್ರಕಟಣೆಯ ಪ್ರಾಮುಖ್ಯತೆಯನ್ನು ವಿವರಿಸಿದರು. ಅವರು ವಿದ್ಯಾರ್ಥಿಗಳಿಗೆ ವಿಚಾರಗಳನ್ನು ಸಂಶೋಧನಾತ್ಮಕ ಪ್ರಕಟಣೆಗಳಾಗಿ ಪರಿವರ್ತಿಸಲು ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ವಹಿಸಿದ್ದರು. ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ. ಸ್ವರ್ಣ ರಾಣಿ ಮತ್ತು ಉದ್ಯೋಗ ಮತ್ತು ತರಬೇತಿ ಅಧಿಕಾರಿ ಪ್ರೊ. ನಾಫಿಯಾ ಅಕ್ತರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಿಂಚನಾ ಕಾರ್ಯಕ್ರಮವನ್ನು ನಿರೂಪಿಸಿ, ವಫಾ ನಾಜ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಸಂತೃಪ್ತಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!