spot_img
Thursday, March 5, 2026
spot_img

ಕುಂದಾಪುರದ ಡಾ.ಬಿ. ಬಿ. ಹೆಗ್ಡೆ ಕಾಲೇಜಿಗೆ ಅಂತಿಮ ಪದವಿ ಪರೀಕ್ಷೆಯಲ್ಲಿ ನಾಲ್ಕು Rank

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಸಿ.ಎ. ಪದವಿಯಲ್ಲಿ ಒಟ್ಟು 4 Rank ಗಳನ್ನು ಗಳಿಸುವ ಮೂಲಕ ಉತ್ಕೃಷ್ಟ ಸಾಧನೆಗೈದಿದ್ದಾರೆ.

ಕೊಲ್ಲೂರು ಸಮೀಪದ ಮುದೂರಿನ ಶೀನ ಪೂಜಾರಿ ಹಾಗೂ ಶ್ರೀಮತಿ ವಿಶಾಲು ದಂಪತಿಗಳ ಪುತ್ರಿ ಶ್ರೇಯಾ ಬಿ.ಕಾಂ. ಪದವಿಯಲ್ಲಿ2ನೇ Rank ಪಡೆದಿದ್ದಾರೆ. ಕೋಣಿಯ ಶಂಕರ್ ಮೊಗವೀರ ಹಾಗೂ ಶ್ರೀಮತಿ ಶಾಂತಾ ದಂಪತಿಗಳ ಪುತ್ರಿ ಸುಹಾನಿ ಬಿ.ಬಿ.ಎ. ಪದವಿಯಲ್ಲಿ 3ನೇ Rank ಪಡೆದಿದ್ದಾರೆ. ಅಂಪಾರು ನೆಲ್ಲಿಕಟ್ಟೆಯ ಪ್ರಭಾಕರ್ ಪಂಗಡಗಾರ ಹಾಗೂ ಶ್ರೀಮತಿ ಶೋಭಾ ದಂಪತಿಗಳ ಪುತ್ರಿ ನಿಖಿತಾ ಬಿ.ಸಿ.ಎ. ಪದವಿಯಲ್ಲಿ 6ನೇ Rank ಪಡೆದಿದ್ದಾರೆ. ಕೋಣಿಯ ರಮೇಶ್ ಮೊಗವೀರ ಹಾಗೂ ಶ್ರೀಮತಿ ವನಜಾ ದಂಪತಿಗಳ ಪುತ್ರಿ ಶೃದ್ಧಾ ಆರ್. ಬಿ.ಬಿ.ಎ. ಪದವಿಯಲ್ಲಿ 8ನೇ Rank ಗಳಿಸಿದ್ದಾರೆ.

ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ, ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ವೃಂದದವರು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!