spot_img
Thursday, March 5, 2026
spot_img

ಅಂಪಾರು ಸಂಜಯಗಾಂಧಿ ಪ್ರೌಢಶಾಲೆಯಲ್ಲಿ  ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ 

ಅಂಪಾರು: ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು , ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ (ರಿ.) ಅಂಪಾರು ಹಾಗೂ ಆಚಾರ್ಯ ಅಕಾಡೆಮಿ ಸಿದ್ದಾಪುರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯು  ಮಾರ್ಚ್ 5ರಂದು ವಿದ್ಯಾದಾಯಿನಿ ಸಭಾಭವನದಲ್ಲಿ ನಡೆಯಿತು.
ವಿವಿಧ ಹಂತಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಅಸಾಮಾನ್ಯ ಗಣಿತ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಸ್ಪರ್ಧೆಯ ಬಳಿಕ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು.
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ (ರಿ.) ಅಂಪಾರು ಇದರ ಅಧ್ಯಕ್ಷರಾದ ಬಲಾಡಿ  ಸಂತೋಷ್ ಕುಮಾರ್ ಶೆಟ್ಟಿಯವರು ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ತರಬೇತಿ ವಿದ್ಯಾರ್ಥಿಗಳಲ್ಲಿ ವೇಗವಾದ ಚಿಂತನೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಇಂತಹ ಸ್ಪರ್ಧೆಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಲು ಮಹತ್ತರ ವೇದಿಕೆಯಾಗಿವೆ ಎಂದು ಹೇಳಿದರು.
ಟ್ರಸ್ಟ್  ಖಜಾಂಚಿ ಹಾಗೂ ಶೈಕ್ಷಣಿಕ ಸಂಚಾಲಕರಾದ  ಸುಭಾಷ್‌ಚಂದ್ರ ಶೆಟ್ಟಿ ಕೊಡ್ಲಾಡಿ ಅವರು ಮಾತನಾಡಿ, ಅಬಾಕಸ್ ಅಭ್ಯಾಸವು ಮಕ್ಕಳ ಗಣಿತದ ಮೇಲಿನ ಭಯವನ್ನು ದೂರ ಮಾಡಿ ಅವರ ಮೆದುಳಿನ ಚುರುಕನ್ನು ಹೆಚ್ಚಿಸುತ್ತದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಸಹಾಯಕವಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಜೆಸಿಐ ಹಾಲಾಡಿ ವಾರಾಹಿ ಇದರ ಅಧ್ಯಕ್ಷರಾದ  ಪ್ರದೀಪ್ ಹಾಲಾಡಿ ಅವರು ವಿಜೇತರನ್ನು ಅಭಿನಂದಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಪಾರ ಸಾಮರ್ಥ್ಯ ಅಡಗಿದೆ. ನಿರಂತರ ಅಭ್ಯಾಸ ಮತ್ತು ಶ್ರಮದ ಮೂಲಕ ಅವರು ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಬಹುದು ಎಂದು ಹೇಳಿದರು.
ಶಾಲೆಯ ಆಡಳಿತಾಧಿಕಾರಿಯಾದ ಶ್ರೀಮತಿ ಚೈತ್ರಾ ಯಡಿಯಾಳ ಅವರು ಮಾತನಾಡಿ, ಶಾಲೆಯಲ್ಲಿ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ತರಬೇತಿಯನ್ನು ಪಠ್ಯಕ್ರಮದ ಭಾಗವಾಗಿ ನೀಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಚಿಂತನೆ ಮತ್ತು ಗಣನೆ ಸಾಮರ್ಥ್ಯದಲ್ಲಿ ಗಮನಾರ್ಹ ಬೆಳವಣಿಗೆ ಕಂಡುಬಂದಿದೆ ಎಂದು ತಿಳಿಸಿದರು. ಜೊತೆಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
 ಸಿದ್ದಾಪುರದ ಆಚಾರ್ಯ ಅಕಾಡೆಮಿಯ  ಶ್ರೇಯಾ ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಿದರು.
ಸ್ಪರ್ಧೆಯಲ್ಲಿ ಮೆರೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಾಂಪಿಯನ್ ಆಫ್ ಚಾಂಪಿಯನ್ಸ್ , ಚಾಂಪಿಯನ್ ಹಾಗೂ ಟಾಪರ್  ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಪ್ರತಿಯೊಂದು ಹಂತದಲ್ಲೂ ಮೂವರು ವಿದ್ಯಾರ್ಥಿಗಳಿಗೆ ಸಾಂತ್ವನ ಬಹುಮಾನ ನೀಡಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
 ಶಿಕ್ಷಕಿ ಕುಮಾರಿ ಸೌಭಾಗ್ಯಲಕ್ಷ್ಮಿ  ಕಾರ್ಯಕ್ರಮವನ್ನು ನಿರೂಪಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!