spot_img
Friday, March 6, 2026
spot_img

ಹಳನಾಡು ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಅಬಾಕಸ್ ಸ್ಫರ್ಧೆ

ಕುಂದಾಪುರ: ಹಳನಾಡು ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚಾರ್ಯ ಅಕಾಡೆಮಿ ಲಿಂಗರೂಪಿಣಿ ಫೌಂಡೇಶನ್ ಟ್ರಸ್ಟ್ ಸಿದ್ದಾಪುರ ಇವರ ವತಿಯಿಂದ ಜಿಲ್ಲಾ ಮಟ್ಟದ ಅಬಾಕಸ್ ಸ್ಫರ್ಧೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಪ್ರದೀಪ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಶಿಕ್ಷಣ ಎನ್ನುವುದು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಲ್ಲ. ಮಕ್ಕಳು ಕೇವಲ ಪಠ್ಯಪುಸ್ತಕದ ಹುಳುಗಳಾಗಿರದೆ ತಮ್ಮನ್ನು ಎಲ್ಲಾ ರೀತಿಯ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧ್ಯ. ಮಕ್ಕಳ ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಅಬಾಕಸ್ ಒಂದು ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

ಈ ಸ್ಪರ್ಧೆಯಲ್ಲಿ ಒಟ್ಟು 46 ವಿದ್ಯಾರ್ಥಿಗಳು ಭಾಗವಹಿಸಿ8 ವಿದ್ಯಾರ್ಥಿಗಳು ಚಾಂಪಿಯನ್ ಆಫ್ ಚಾಂಪಿಯನ್, 8ವಿದ್ಯಾರ್ಥಿಗಳು ಚಾಂಪಿಯನ್, 8 ಪ್ರಥಮ ಹಾಗೂ 22 ವಿದ್ಯಾರ್ಥಿಗಳು ಸಮಾಧಾನಕರ ಪ್ರಶಸ್ತಿಯನ್ನು ಪಡೆದುಕೊಂಡರು.

ಈ ಕಾರ್ಯಕ್ರಮವನ್ನು ಅಬಾಕಸ್ ಶಿಕ್ಷಕಿಯಾದ ಶ್ರೀಮತಿ ಶೃತಿ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷರಾದ ರೇಷ್ಮಾ ಪ್ರದೀಪ್ ಶಾಲಾ ಮುಖ್ಯೋಪಾಧ್ಯಾಯಿನಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!