spot_img
Saturday, March 7, 2026
spot_img

ಪತ್ರಕರ್ತನೆಂಬ ಲೇಬಲ್ ಇಟ್ಟುಕೊಂಡು ಬ್ಲಾಕ್‌ಮೇಲ್ ದಂಧೆಗೆ ಕಡಿವಾಣ ಅಗತ್ಯ-ಶಿವಾನಂದ ತಗಡೂರು

ಉಡುಪಿ ಜಿಲ್ಲೆ, ತಾಲೂಕು ಪತ್ರಕರ್ತರ ಸಂಘಗಳ ಪದಗ್ರಹಣ

ಉಡುಪಿ, ಮಾ.7: ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್‌ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.

ಉಡುಪಿ ಬ್ರಹ್ಮಗಿರಿಯ ಐ‌ಎಂಎ ಭವನದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿ ಮತ್ತು ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಹೆಬ್ರಿ ತಾಲೂಕು ಘಟಕಗಳ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರನ್ನು ಸಮಾಜ ಗುರುತಿಸಬೇಕು, ನಾನೊಬ್ಬ ಪತ್ರಕರ್ತ ಎಂದು ವಿಸಿಟಿಂಗ್ ಕಾರ್ಡ್ ಹಿಡಿದುಕೊಂಡು ತಿರುಗಾಡುವುದು ನಿಜವಾದ ಪತ್ರಕರ್ತನ ಲಕ್ಷಣವಲ್ಲ, ಪತ್ರಕರ್ತನ ಸಾಮಾಜಿಕ ಕಳಕಳಿ, ಬದ್ದತೆ, ಚಿಂತನೆಗಳಿಂದ ಸಮಾಜ ಗುರುತಿಸುವಂತಾಗಬೇಕು ಎಂದು ಅವರು ಹೇಳಿದರು.

ಪತ್ರಕರ್ತರು ಮಾಡುವ ಸುದ್ದಿಯಿಂದ ಸಮಾಜಕ್ಕೆ ಪ್ರಯೋಜನವಾದರೆ ಮಾತ್ರ ಈ ವೃತ್ತಿ ಸಾರ್ಥಕ ಎನಿಸುತ್ತದೆ. ಇಂದಿನ ಮಾಧ್ಯಮಗಳು ಸಮಾಜದ ಅಸಮತೋಲನಗಳನ್ನು ತಿದ್ದುವ ಸುದ್ದಿಗಳಿಗಿಂತ ‘ಸ್ಟೇಟ್‌ಮೆಂಟ್ ಓರಿಯೆಂಟೆಡ್’ ಸುದ್ದಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಜನಪರ ಸುದ್ದಿಗಳತ್ತ ಗಮನ ಹರಿಸಬೇಕು. ವರದಿ ಮಾಡುವಾಗ ಸಾಮಾಜಿಕ ಪ್ರಜ್ಞೆ ಕೂಡ ಪತ್ರಕರ್ತರಿಗೆ ಅತ್ಯಂತ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಸಮಾಜವು ಪತ್ರಕರ್ತರನ್ನು ಬಹಳ ಜವಾಬ್ದಾರಿಯುತ ಸ್ಥಾನದಲ್ಲಿ ಇಟ್ಟಿದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಪತ್ರಕರ್ತರು ಎಚ್ಚರಿಕೆಯಿಂದ ಮತ್ತು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಪತ್ರಕರ್ತನ ಬರವಣಿಗೆಯಷ್ಟೇ ಅಲ್ಲ, ಅವರ ನಡೆನುಡಿಗಳೂ ಮುಖ್ಯವಾಗಿವೆ. ಪತ್ರಕರ್ತರ ವೃತ್ತಿಯನ್ನು ಸ್ವೀಕರಿಸಿದ ನಂತರ ಅದಕ್ಕೆ ತಕ್ಕಂತೆ ನಡೆದುಕೊಳ್ಳುವುದು ಮತ್ತು ವೃತ್ತಿ ಮನೋಭಾವ ರೂಢಿಸಿಕೊಳ್ಳುವುದು ಅಗತ್ಯ. ಈ ನಿಟ್ಟಿನಲ್ಲಿ ಸಂಘ ಕೂಡ ಕಾರ್ಯನಿರ್ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ನೂತನ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಉಸ್ತುವಾರಿ ಹಾಗೂ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮತ್ತು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡುವ ಮಾಸಿಕ ಪತ್ರಿಕೆ ‘ಸನ್ಮತಿ’ಯನ್ನು ರಾಜ್ಯಾಧ್ಯಕ್ಷರು ಬಿಡುಗಡೆಗೊಳಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ರಾಜ್ಯ ಸಮಿತಿ ಸದಸ್ಯ ಅಸ್ಟೋ ಮೊಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಹಾಗೂ ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ, ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದನ ಕೊಡವೂರು ಹಾಗೂ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕೃತೆ ಯಶೋಧಾ ಕೇಶವ್ ಅವರನ್ನು ಸನ್ಮಾನಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನ ಪದಾಧಿಕಾರಿಗಳ ಪಟ್ಟಿಯನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್ ಆರಾಡಿ ವಾಚಿಸಿದರು. ರಾಮಾಂಜಿ ನಮ್ಮಭೂಮಿ ಆಶಯಗೀತೆ ಹಾಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಚೇತನ್ ಮಟಪಾಡಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!