spot_img
Saturday, March 7, 2026
spot_img

ರಾಷ್ಟ್ರೀಯ ಜನಗಣತಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ :ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು,
ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ
ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027 ಫೆಬ್ರವರಿಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ
ಟಿ. ಕೆ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2027 ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ಮಾರ್ಗಸೂಚಿಯನ್ವಯ ಗಣತಿ ಕಾರ್ಯಗಳನ್ನು ಕೈಗೊಳ್ಳಲು ಅವಶ್ಯಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ
ನೇಮಕ ಕಾರ್ಯಗಳನ್ನು ಮಾಡಿಕೊಳ್ಳಬೇಕು, ಮನೆಗಳ ಪಟ್ಟಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿ
ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುವುದು. ಮನೆ ಗಣತಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲು
ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ, ಮತ್ತು ಕ್ಷೇತ್ರ ಕಾರ್ಯಕರ್ತರ
ನೇಮಕಾತಿ ಕುರಿತು ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಗೊಳಿಸಲು ತಿಳಿಸಿದರು.

ಜಿಪಿಎಸ್ ಆಧಾರಿತ ಮ್ಯಾಪಿಂಗ್ ಪೂರ್ಣಗೊಳಿಸಬೇಕು. ಎಲ್ಲ ಅಗತ್ಯ ಕ್ರಮಗಳನ್ನು ಕಾಲಮಿತಿಯಲ್ಲಿ ನಡೆಸಬೇಕು. ಇದಕ್ಕಾಗಿ
ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಉದಯ ಕುಮಾರ್ ಶೆಟ್ಟಿ,
ಸಹಾಯಕ ಕಮಿಷನರ್ ರಶ್ಮಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು
ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!