spot_img
Monday, March 9, 2026
spot_img

ಹಾಲಾಡಿ ಜೆಸಿಐ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ

ಹಾಲಾಡಿ :ಹಾಲಾಡಿ ಜೆಸಿಐ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8ರಂದು ಭಾನುವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಲೇಡಿ ಜೆಸಿಪ್ರೆಸಿಡೆಂಟ್ ಅವಶ್ಯ ಶೆಟ್ಟಿ ಮಹಿಳಾ ಶೋಷಣೆಯ ಬಗ್ಗೆ ಮಾತನಾಡಿ, ಮಹಿಳೆಯರ ಮೇಲಾಗುವ ಶೋಷಣೆಯನ್ನು ಎದುರಿಸಲು ನಾವು ಮಾನಸಿಕ ಮತ್ತು ದೈಹಿಕವಾಗಿ ಶಕ್ತರಾಗಬೇಕು ಎಂದು ಅಭಿಪ್ರಾಯಪಟ್ಟರು..ಹೈನುಗಾರಿಕೆ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ ಗೀತಾ ನಾಯ್ಕ್ ಮುದೂರಿ ಮತ್ತು ಪೌರ ಕಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಬಾಗಿ ಹಾಲಾಡಿ ಅವರನ್ನು ಜೆಸಿಐ ಅಧ್ಯಕ್ಷರಾದ ಪ್ರದೀಪ್ ಹಾಲಾಡಿಯವರು ಗೌರವಿಸಿ, ಲಿಂಗ ಸಮಾನತೆ, ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಿದರು.

ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಹಿಳೆಯರ ಆರೋಗ್ಯದ ಬಗ್ಗೆ ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ದೀಪಾ ಅವರು ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ ,ರಾಘವೇಂದ್ರ ಕುದ್ರುಬೆಟ್ಟು, ಕಾರ್ಯದರ್ಶಿ ಮಂಜುಳಾ ಶೆಟ್ಟಿ, ಜೇಸಿಐ ಸಂಯೋಜಕಿ ಆಶಾ ರಾಜೀವ ಕುಲಾಲ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯಶೋಧ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!