spot_img
Monday, March 9, 2026
spot_img

ವಿ‌ಎಂಕೆಯಲ್ಲಿ ಮಾತೃವಂದನಾ ಮತ್ತು ಶಿಸ್ತುಬದ್ದ ಪರೀಕ್ಷಾ ತರಬೇತಿ

ಕುಂದಾಪುರ: ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ-ವಂಡ್ಸೆ ಇಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾತೃವಂದನಾ ಕಾರ್ಯಕ್ರಮ ಹಾಗೂ ಶಿಸ್ತುಬದ್ಧ ಪರೀಕ್ಷಾ ಕಾರ್ಯಾಗಾರ ಮಾ.೬ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಸುಭಾಶ್ಚಂದ್ರ ಶೆಟ್ಟಿ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯರಾದ ದಿನಕರ ಆರ್.ಶೆಟ್ಟಿ ಬಸ್ರೂರು ಅವರು ಶಿಸ್ತುಬದ್ಧ ಪರೀಕ್ಷಾ ತರಬೇತಿಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ಪಾತ್ರದ ಕುರಿತು ಮಾತನಾಡಿದರು.
ಬಗ್ವಾಡಿ ಶ್ರೀ ಮಹಿಷಾಸುಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರಾದ ಉದಯಕುಮಾರ ಹಟ್ಟಿಯಂಗಡಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಮಾತೃವಂದನಾ ಕಾರ್ಯಕ್ರಮದ ವಿಧಿವಿಧಾನಗಳನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಡುಪಿ ಜಿಲ್ಲಾ ಸಹ ಕಾರ್ಯವಾಹ ಪ್ರಶಾಂತ್ ಅರೆಶಿರೂರು ನಿರ್ವಹಿಸಿದರು.
ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾನ್ವಿ, ಸ್ವಸ್ತಿ, ಅನುಜ್ಞಾ, ತ್ರಿಶಾ, ಸಂಭ್ರಮ ಪ್ರಾರ್ಥನೆ ನೆರವೇರಿಸಿದರು. ತನ್ವಿ ವಂದಿಸಿದರು. ಅಂಕಿತಾ ಮತ್ತು ಗಮನ್ಯಾ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!