spot_img
Tuesday, March 10, 2026
spot_img

ಮೂಡುಬಗೆ ಶಾಲೆಯಲ್ಲಿ ಎ‌ಐ ತಂತ್ರಜ್ಞಾನಾಧಾರಿತ ರೋಬೋಟ್ ಶಿಕ್ಷಣ ಪದ್ಧತಿ ಉದ್ಘಾಟನೆ

ಅಂಪಾರು: ಶತಮಾನೋತ್ಸವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡುಬಗೆ, ಅಂಪಾರು ಇಲ್ಲಿ ಮಾ.9ರಂದು ಹಳೆ ವಿದ್ಯಾರ್ಥಿಗಳ ಸಂಘದ ಕನಸಿನಂತೆ ಬೆಳದಿಂಗಳು ಚಾರಿಟೇಬಲ್ ಟ್ರಸ್ಟ್ (ರಿ) ಇವರ ನೇತೃತ್ವದಲ್ಲಿ ವಿಜ್ಞಾನ ಪ್ರಯೋಗಾಲಯ ಸಾಮಗ್ರಿಗಳು ಹಾಗೂ ಎ‌ಐ ತಂತ್ರಜ್ಞಾನಾಧಾರಿತ ರೋಬೋಟ್ ಶಿಕ್ಷಣ ಪದ್ಧತಿಯ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಯಿತು.

ನೂತನ ರೋಬೋಟ್ ಅನ್ನು ಶಾಲೆಗೆ ಕೊಡುಗೆಯಾಗಿ ಬೆಳದಿಂಗಳು ಚಾರಿಟೇಬಲ್ ಟ್ರಸ್ಟ್ ಗೌರವ ಸಲಹೆಗಾರರಾದ ನಿಟ್ಟೆಯ ಸಿ‌ಇ‌ಒ ಎ‌ಐಸಿ ಅನಂತ ಪದ್ಮನಾಭ ಆಚಾರ್ ಇವರು ಬೋಧನಾ ಕಾರ್ಯಕ್ಕೆ ಅನುಕೂಲವಾಗುವಂತೆ ವಿದ್ಯುಕ್ತವಾಗಿ ಚಾಲನೆಗೊಳಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ದಿನಕರ ಶೆಟ್ಟಿ ಅಂಪಾರು ವಿಜ್ಞಾನ ಪ್ರಯೋಗಾಲಯ ಸಾಮಗ್ರಿಗಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನಕರ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ ಶೆಟ್ಟಿ, ಉಪಾಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ರಮೇಶ್ ಕನ್ನಾಲಿ, ಬೆಳದಿಂಗಳು ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ಸುಬ್ಬಣ್ಣ ಶೆಟ್ಟಿ, ಪತ್ರಕರ್ತ ಸತೀಶ್ ಆಚಾರ್, ನಿಟ್ಟೆ ಪ್ರಯೋಗಾಲಯದ ಸಂಶೋಧಕ ತಂಡದ ಶೋಧನ್ ಹಾಗೂ ಆನಂದ್, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ನಂತರ ಮಹಿಳಾ ದಿನಾಚರಣೆ ಅಂಗವಾಗಿ ಶಾಲೆಯ ಹಳೆ ವಿದ್ಯಾರ್ಥಿಗಳು ಪೋಷಕರು ಆದ ಸಂಜೀವಿನಿ ಗ್ರಾಮಮಟ್ಟದ ಒಕ್ಕೂಟದ ಅಧ್ಯಕ್ಷರಾದ ಲಲಿತ ಶೆಟ್ಟಿ, ಕಾರ್ಯದರ್ಶಿಯಾದ ರೇಖಾ, ಕೋಶಾಧಿಕಾರಿಯಾದ ಪ್ರಫುಲ್ ಚಂದ್ರಿಕಾ ಇವರನ್ನು ಹಾಗೂ ಶಾಲೆಯ ಎಲ್ಲಾ ಮಹಿಳಾ ಶಿಕ್ಷಕಿಯರನ್ನು, ಅಡುಗೆ ಸಿಬ್ಬಂದಿಯವರನ್ನು ಮತ್ತು ಎಲ್.ಕೆ.ಜಿ ಸಹಾಯಕಿಯವರನ್ನು ಗೌರವಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಮೇಶ್ ವಂದಿಸಿದರು. ಸಹ ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!