spot_img
Wednesday, March 11, 2026
spot_img

ಬಸ್ರೂರು : ಶ್ರೀ ಶಾರದಾ ಕಾಲೇಜಿನ ಸಂಚಾಲಕರಾಗಿ ಅನುಪಮ ಎಸ್ ಶೆಟ್ಟಿ

ಕುಂದಾಪುರ: ತಾಲ್ಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಸ್ರೂರು ಶ್ರೀ ಶಾರದಾ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ನೂತನ ಸಂಚಾಲಕರನ್ನಾಗಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಫೆ.11 ರಂದು ನಡೆದ ಶ್ರೀಶಾರದಾ ಕಾಲೇಜು ಟ್ರಸ್ಟ್ (ರಿ) ಇದರ ಸಭೆಯಲ್ಲಿ ಹಿಂದಿನ ಆಡಳಿತ ಮಂಡಳಿಯ ಸಂಚಾಲಕರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನೂತನ ಸಂಚಾಲಕರ ಆಯ್ಕೆ ನಡೆಸಲಾಗಿತ್ತು. ಆಡಳಿತ ಮಂಡಳಿಯ ನೂತನ ಸಂಚಾಲಕರಾಗಿ ಆಯ್ಕೆಯಾಗಿರುವ ಅನುಪಮಾ ಎಸ್ ಶೆಟ್ಟಿ ಅವರು, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃಧ್ಧಿಗೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರು ಜಂಟಿ ಕಾರ್ಯನಿರ್ವಾಹಕ ಟ್ರಸ್ಟಿಯಾಗಿರುವ ಪ್ರತಿಷ್ಠಿತ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ಅಧೀನದಲ್ಲಿ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ಬಾಂಡ್ಯ ಎಜುಕೇಶನಲ್ ಟ್ರಸ್ಟ್ ದತ್ತು ಸ್ವೀಕಾರ ಮಾಡಿರುವ ಕೊಡ್ಲಾಡಿ-ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಯಲ್ಲಿಯೂ ಸಾಕಷ್ಟ್ಟು ಅವರು ಕೊಡುಗೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!