spot_img
Friday, March 13, 2026
spot_img

“ಸಂಸ್ಕೃತವು ಲೋಕಹಿತವನ್ನು ಬಯಸುವ ಭಾಷೆ”: ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಡುಪಿ: ದಿನಾಂಕ 05-03-2026ರಂದು ಪೂರ್ವಾಹ್ನ 10.30 ಗಂಟೆಗೆ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ , ಉಡುಪಿ ಜಿಲ್ಲಾ ಲೀಡ್ ಕಾಲೇಜಿನ ಸಂಸ್ಕೃತ ವಿಭಾಗವು ಆಯೋಜಿಸಿದ್ದ ವಿಶೇಷ ಉಪನ್ಯಾಸ ಮತ್ತು ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಡುಪಿಯ ಪ್ರಖ್ಯಾತ ವಿದ್ವಾಂಸರು, ಶತಾವಧಾನಿಗಳು, ಮಹಾಮಹೋಪಾಧ್ಯಾಯ ಡಾ. ರಾಮನಾಥ ಆಚಾರ್ಯ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂಸ್ಕೃತ ಭಾಷೆಯ ಮತ್ತು ದೈನಂದಿನ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕಾಗಿರುವ ಮೌಲ್ಯಗಳ ಶಾಸ್ತ್ರೀಯ ಅಂಶಗಳನ್ನು ತಿಳಿಸಿದರು.
ಲೋಕಹಿತಂ ಮಮಕರಣೀಯಂ ಎನ್ನುವ ಸಂಸ್ಕೃತ ಗೀತೆಯ ಹಿನ್ನೆಲೆಯನ್ನು ಇಟ್ಟುಕೊಂಡು ವಿದ್ಯಾರ್ಥಿಗಳೊಂದಿಗೆ ಚರ್ಚೆಯನ್ನು ನಡೆಸುತ್ತಾ ಮಾನವನಿಗಿಂತ ಪೂರ್ವದಲ್ಲಿ ಈ ಲೋಕದಲ್ಲಿದ್ದ ವೃಕ್ಷಗಳು, ಜೀವಜಂತುಗಳ ಜೀವನಕ್ರಮವನ್ನು ತಿಳಿಸುತ್ತಾ ಮನುಷ್ಯನು ಲೋಕಕ್ಕೆ ಒಳಿತನ್ನು ಮಾಡುವ ಊರ್ಧ್ವಮುಖಿ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಉದಾಹರಣ ಸಹಿತ ವಿವರಿಸಿದರು.
ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅರಿಷಡ್ವರ್ಗಗಳನ್ನು ಗೆಲ್ಲುವ ಮಾರ್ಗವನ್ನು ವಿಶಿಷ್ಟ ಕಥೆಗಳ ಮೂಲಕ ಮನವರಿಕೆ ಮಾಡಿಕೊಟ್ಟರು. ಕಾರ್ಯಕ್ರಮದ ಆರಂಭದಲ್ಲಿ ದ್ವಿತೀಯಬಿ.ಕಾಂ. ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಪಿ.ಬಿಪ್ರಸನ್ನರವರು ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಸ್ಕೃತ ವಿಭಾಗ ಉಪನ್ಯಾಸಕರಾದ ಡಾ. ಅರವಿಂದ ಶ್ಯಾನಭಾಗರವರು ಅತಿಥಿಗಳನ್ನು ಪರಿಚಯಿಸಿದರು.
ದ್ವಿತೀಯಬಿ.ಕಾಂ. ವಿದ್ಯಾರ್ಥಿನಿಯರು ಮನಸಾಸತತಂಸ್ಮರಣೀಯ ಸಮೂಹಗೀತೆಯನ್ನು ಶ್ರಾವ್ಯವಾಗಿ ಹಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸೋಜನ್ ಕೆ.ಜಿ.ರವರು ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ನಿಕೇತನರವರು ಧನ್ಯವಾದ ಸಮರ್ಪಣೆಯನ್ನು ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶತಾವಧಾನಿಯಾದ ಡಾ. ರಾಮನಾಥ ಆಚಾರ್ಯ ಇವರನ್ನು ಕಾಲೇಜಿನ ಪರವಾಗಿ ಪ್ರಾಂಶುಪಾಲರು ಶಾಲು ಹೊದಿಸಿ ಸನ್ಮಾನಿಸಿದರು. ಪ್ರಥಮ ಬಿ.ಸಿ.ಎ. ವಿದ್ಯಾರ್ಥಿಗಳು ಶಾಂತಿಮಂತ್ರವನ್ನು ಪಠಿಸಿದರು. ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿಯಾದ ಕು. ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!