spot_img
Monday, April 27, 2026
spot_img

ಬಿ.ಬಿ.ಹೆಗ್ಡೆಕಾಲೇಜು: ಜೀವನಮೌಲ್ಯ ಉಪನ್ಯಾಸ ಮಾಲಿಕೆ

ಕುಂದಾಪುರ (ಮಾ.12): ನಮ್ಮ ಆಲೋಚನೆಗಳು ಶುದ್ಧವಾಗಿದ್ದಲ್ಲಿ ಸಂಸ್ಕಾರವು ಉತ್ತಮವಾಗಿರುತ್ತದೆ. ಮಾಡುವ ಕಾರ್ಯದಲ್ಲಿ ನಿಷ್ಠೆ, ಪರಿಶ್ರಮಗಳು ಇದ್ದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಸಂಸ್ಕಾರಯುತ ಚಾರಿತ್ರ್ಯ ಅತ್ಯುನ್ನತ ಪ್ರತೀಕ ಎಂದು ಕುಂದಾಪುರದ ಸ್ಪರ್ಧಾಸಾರಥಿ ಕೆ.ಎ.ಎಸ್.ಅಕಾಡೆಮಿ ಕುಂದಾಪುರದ ನಿರ್ದೇಶಕರಾದ ಆದರ್ಶ ಕೆಲ ಹೇಳಿದರು.
ಇವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಯೋಜಿಸಿದ ಜೀವನಮೌಲ್ಯ ಸರಣಿ ಉಪನ್ಯಾಸ ಮಾಲಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ  ರಕ್ಷಿತ ರಾವ್ ಗುಜ್ಜಾಡಿ,   ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸಿರಿ ಸ್ವಾಗತಿಸಿ, ದಿವಿಜ ಅತಿಥಿಗಳನ್ನು ಪರಿಚಯಿಸಿ, ಪ್ರತೀಕ್ಷಾ ವಂದಿಸಿ, ಪ್ರಥಾ ಆರ್.ಶೆಟ್ಟಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!